ತುಮಕೂರು | ತೆಂಗು ಬೆಳೆಗಾರರ ವಿಷಯದಲ್ಲಿ ಮುಖ್ಯಮಂತ್ರಿ ಕಂಜೂಸ್; ತುರುವೇಕೆರೆ ಶಾಸಕ ವಾಗ್ದಾಳಿ

Date:

ರಾಜ್ಯದ 13 ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಬ್ಬರಿ ಬೆಳೆಯ ಬಗ್ಗೆ ಕಂಜೂಸ್ ಗಿರಾಕಿ ಎನಿಸಿದ್ದಾರೆ ಎಂದು ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ನೇರ ವಾಗ್ದಾಳಿ ನಡೆಸಿದರು.

ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿರುವ ತುರುವೇಕೆರೆ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು.

“ಕೊಬ್ಬರಿ ಬೆಲೆ ವಿಚಾರವನ್ನು ಸದನದಲ್ಲಿ ಬಹು ಸಮಯ ಚರ್ಚೆ ಮಾಡಿದ್ದೇನೆ. ಉತ್ಪಾದನಾ ವೆಚ್ಚ ಅನುಗುಣವಾಗಿ ಬೆಲೆ ನಿಗದಿ ಮಾಡಲು ಒತ್ತಡ ತಂದರೂ ಕೇವಲ ₹250 ನೀಡಿ ಜಿಪುಣತನ ಮೆರೆದಿದ್ದಾರೆ. ಈ ಬಗ್ಗೆ ಮುಂದಿನ ವಾರದಲ್ಲಿ 13 ಜಿಲ್ಲೆಯ ರೈತರ ಸಭೆ ನಡೆಸಿ ತೀವ್ರ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ನಡೆಸಲು ಹಣವಿಲ್ಲದೆ ಸರ್ಕಾರಿ ನೌಕರರಿಗೆ ವೇತನ ನೀಡಲು ಆಗುತ್ತಿಲ್ಲ. ಹೊರ ಗುತ್ತಿಗೆ ಸಿಬ್ಬಂದಿಗಳಿಗೆ ನಾಲ್ಕೈದು ತಿಂಗಳ ಸಂಬಳ ನೀಡಬೇಕಿದೆ. ಗ್ಯಾರಂಟಿ ಹೆಸರಿನಲ್ಲಿ ಬೇರೆ ಯಾವುದೇ ಅಭಿವೃದ್ಧಿ ಕೆಲಸ ಮಾಡದ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಒಪ್ಪಿಕೊಳ್ಳಬೇಕಿದೆ” ಎಂದು ಕಿಡಿಕಾರಿದರು.

“ಈ ಹಿಂದೆ ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಅಂತಿದ್ದರು. ಈಗ ಕಾಂಗ್ರೆಸ್ 60 ಪರ್ಸೆಂಟ್ ಸರ್ಕಾರ ಎನಿಸಿದೆ” ಎಂದು ವ್ಯಂಗ್ಯವಾಡಿದರು.

“ಜಾತಿ ಗಣತಿ ಕಾರ್ಯ ಸರಿಯಾಗಿ ಮಾಡಿಲ್ಲ ಎಂಬ ಮಾತು ಇರುವಾಗ ಗಣತಿ ವಿಚಾರ ಕೈ ಬಿಡದೆ ಕೆಲ ಜಾತಿಗಳಿಗೆ ಅನ್ಯಾಯ ಮಾಡಲು ಕಾಂಗ್ರೆಸ್ ಹೊರಟಿದೆ. ನಾಲ್ಕು ಜನಾಂಗ ಸೇರಿಸಿ ಎಸ್‌ ಎನ್ನುವುದು ಮತ್ತೊಂದು ಕಡೆ ಒಳಜಾತಿ ಹೆಸರಿನಲ್ಲಿ ಮತ್ತೊಂದು ಜಾತಿ ಸೃಷ್ಟಿ ಮಾಡುವುದು. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ದೇವೇಗೌಡರು ಹೋರಾಟ ಮಾಡಿದರೆ, ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನಾಡುತ್ತಿಲ್ಲ. ಒಕ್ಕಲಿಗ, ಲಿಂಗಾಯತ ಒಡೆಯುವ ಸರ್ಕಾರದ ಗಣತಿ ಬೇಕಿಲ್ಲ. ಈ ಬದಲು ಆಯಾ ಜನಾಂಗಕ್ಕೆ ವಹಿಸಿದಲ್ಲಿ ಅವರಿಂದಲೇ ಸೂಕ್ತ ಗಣತಿ ಅಂಕಿ ಅಂಶ ಸಿಗಲಿದೆ ಎಂದು ಸಲಹೆ ನೀಡಿದ ಅವರು ಲೋಕಾಸಭಾ ಚುನಾವಣೆ ಅಭ್ಯರ್ಥಿ ವಿಚಾರದಲ್ಲಿ ನಮ್ಮ ವರಿಷ್ಠರ ನಿರ್ಧಾರದಂತೆ ನಡೆಯುತ್ತೇವೆ. ನಾನು ಅಭ್ಯರ್ಥಿ ಆಕಾಂಕ್ಷಿಯಲ್ಲ” ಎಂದು ಸ್ಪಷ್ಟ ಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೊಬ್ಬರಿಗೆ ಬೆಂಬಲ ಬೆಲೆ, ನಾಫೆಡ್ ಖರೀದಿ ಕೇಂದ್ರ ತೆರೆಯಲು ಆಗ್ರಹ

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಬಿ ಆರತಿ ಅವರಿಗೆ ಸೂಚಿಸಿ ತುರುವೇಕೆರೆ ಕ್ಷೇತ್ರದ ಏಳು ಗ್ರಾಮ ಪಂಚಾಯಿತಿ ಜನರ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವಂತೆ ತಿಳಿಸಿದರು.

ಜೆಡಿಎಸ್ ಹೋಬಳಿ ಅಧ್ಯಕ್ಷ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಬೋರಪ್ಪನಹಳ್ಳಿ ಕುಮಾರ್, ಮುಖಂಡರುಗಳಾದ ವೀರಣ್ಣಗುಡಿ ರಾಮಣ್ಣ, ಚೆಂಗಾವಿ ಕುಮಾರ್, ರಾಘವೇಂದ್ರ, ಜಾಲಿಪಾಳ್ಯ ಸಂತೋಷ್, ಗದ್ದೇಹಳ್ಳಿ ನರಸೇಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...