ತುಮಕೂರು | ಪೌರಕಾರ್ಮಿಕ ಅಯ್ಯಪ್ಪನ ಮನೆ ಬೆಂಕಿಗೆ ಆಹುತಿ : ಪರಿಹಾರಕ್ಕೆ ಸಿಪಿಎಂ ಒತ್ತಾಯ

Date:

ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದು, ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಜೀವನೋಪಾಯಕ್ಕಾಗಿ ದುಡಿಯುತ್ತಿರುವ ಪೌರಕಾರ್ಮಿಕ ಕುಟುಂಬಕ್ಕೆ ಈ ಘಟನೆ ದೊಡ್ಡ ಆಘಾತವಾಗಿದೆ.

IMG 20260307 WA0078

ಈ ದುರ್ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ತುಮಕೂರು ಮಹಾನಗರ ಪಾಲಿಕೆ ತಕ್ಷಣ ಗಮನಹರಿಸಿ ಮನೆ ಹಾಗೂ ಮನೆಯಲ್ಲಿದ್ದ ವಸ್ತುಗಳ ನಷ್ಟವನ್ನು ಪರಿಗಣಿಸಿ ನ್ಯಾಯೋಚಿತ ಮತ್ತು ಸಮರ್ಪಕ ಪರಿಹಾರವನ್ನು ನೀಡಬೇಕು ಎಂದು ಸಿಪಿಎಂ ತುಮಕೂರು ನಗರ ಸಮಿತಿ ಒತ್ತಾಯಿಸಿದೆ.

IMG 20260307 WA0079

ಅಧಿಕಾರಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಮಹಜರ್ ನಡೆಸಿರುವುದು ಸರಿಯೇ. ಆದರೆ ಕೇವಲ ಮಹಜರ್ ನಡೆಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಬೆಂಕಿಯಿಂದ ಎಲ್ಲವನ್ನೂ ಕಳೆದುಕೊಂಡಿರುವ ಕುಟುಂಬಕ್ಕೆ ತಕ್ಷಣ ಆರ್ಥಿಕ ನೆರವು, ತಾತ್ಕಾಲಿಕ ವಸತಿ ವ್ಯವಸ್ಥೆ ಹಾಗೂ ಅಗತ್ಯ ಜೀವನೋಪಾಯ ಸಾಮಗ್ರಿಗಳನ್ನು ಒದಗಿಸಲು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ(ಎಂ) ನೀಯೋಗ ಸ್ಥಳಕ್ಕೆ ತೆರಳಿ ಪರೀಶಿಲಿಸಿ ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀಯೋಗದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಸೈಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ನಗರ ಕಾರ್ಯದರ್ಶಿ ಎ.ಲೋಕೇಶ್ ಉಪಸ್ಥಿತರಿದ್ದರು.

ಪೌರಕಾರ್ಮಿಕರು ನಗರ ಸ್ವಚ್ಛತೆಗಾಗಿ ಹಗಲಿರುಳು ದುಡಿಯುವವರು. ಅವರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಮತ್ತು ಆಡಳಿತ ಸ್ಪಂದಿಸದಿದ್ದರೆ ಅದು ಮಾನವೀಯತೆಯ ಕೊರತೆಯಾಗಿದೆ. ಆದ್ದರಿಂದ ಈ ಕುಟುಂಬಕ್ಕೆ ತಕ್ಷಣ ಸಮರ್ಪಕ ಪರಿಹಾರ ನೀಡಿ ಮಾನವೀಯತೆ ತೋರಬೇಕು ಎಂದು ಸಿಪಿಐ(ಎಂ) ನಗರ ಸಮಿತಿ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...

ಗುಬ್ಬಿ | ಮೆದುಳು ಕ್ಯಾನ್ಸರ್‌ ಪೀಡಿತ ಬಾಲಕಿ ಮನೆಗೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರ ಭೇಟಿ

 ಮೆದುಳು ಕ್ಯಾನ್ಸರ್ ಚಿಕಿತ್ಸೆಗೆ ಸೂಕ್ತ ಚಿಕಿತ್ಸೆಗೆ ಆಧಾರ್ ಕಾರ್ಡ್ ಅಡ್ಡಿಯಾದ ಹಿನ್ನೆಲೆ...