ತುಮಕೂರು | ಚುನಾವಣೆಗೆ ಹಣ ಹೊಂದಿಸಲು ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ತೊಡಗಿದೆ; ಬಿಜೆಪಿ ಆರೋಪ

Date:

ಬೆಂಗಳೂರಿನ ಮಾಜಿ ಕಾರ್ಪೋರೇಟರ್, ಕಾಂಗ್ರೆಸ್‌ ಮುಖಂಡೆ ಅಶ್ವಥಮ್ಮ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, 42 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಎತ್ತಿ ತೋರಿಸಿದೆ. ಐದು ರಾಜ್ಯಗಳ ಚುನಾವಣೆಗೆ ಹಣ ಹೊಂದಿಸಲು ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಆರೋಪಿಸಿದ್ದಾರೆ.

ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಪ್ರತಿಭಟನೆಯಲ್ಲಿ ಮಾತನಾಡಿದ ರವಿಶಂಕರ್, “ಬಿಬಿಎಂಪಿಯ 650 ಕೋಟಿ ರೂ. ಮೊತ್ತದ ಕಾಮಗಾರಿಗೆ ಎನ್‌ಓಸಿ ನೀಡಿ. ಅದರಿಂದ ಸುಮಾರು 82 ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲಾಗಿದೆ. ಗ್ಯಾರಂಟಿಗಳ ಜಾರಿ ಬರದಲ್ಲಿ ರೈತರಿಗೆ ಅನುಕೂಲವಾಗಿದ್ದ ಕೃಷಿ ಸನ್ಮಾನ್, ಕೃಷಿ ವಿದ್ಯಾನಿಧಿ ಯೋಜನೆಗಳನ್ನು ಕೈಬಿಟ್ಟು ರೈತರಿಗೆ ಕಾಂಗ್ರೆಸ್‌ ಸರ್ಕಾರ ಮೋಸ ಮಾಡಿದೆ. ಇಂತಹ ಸರ್ಕಾರ ತೊಲಗಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು” ಎಂದರು.

ಪ್ರತಿಭಟನೆಯಲ್ಲಿ  ಶಾಸಕ ಜಿ.ಬಿ ಜೋತಿಗಣೇಶ್ ಮಾತನಾಡಿ, “ಕಾಂಗ್ರೆಸ್ ಐದು ರಾಜ್ಯಗಳ ಚುನಾವಣೆಗೆ ಹಣ ಒದಗಿಸಲು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬುದಕ್ಕೆ ಐಟಿ ರೈಡ್ ನಡೆದ ಎರಡು ಸ್ಥಳಗಳಲ್ಲಿ ದೊರೆತಿರುವ ಕೋಟಿ-ಕೋಟಿ ಅಕ್ರಮ ಹಣವೇ ಸಾಕ್ಷಿಯಾಗಿದೆ. ಮಾಧ್ಯಮಗಳ ಮೂಲಕ ಇಡೀ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ಹಗಲು ಧರೋಡೆ ಪರಿಚಯವಾಗಿದೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ನಂಬಿ ಮತ ನೀಡಿದ ಜನತೆಗೆ ಕತ್ತಲೇ ಭಾಗ್ಯವನ್ನು ಕರುಣಿಸಿದ್ದಾರೆ. ಅಭಿವೃದ್ದಿ ಎಂಬುದು ಶೂನ್ಯವಾಗಿದೆ. ಸರ್ಕಾರ ಬಂದು ಐದು ತಿಂಗಳು ಕಳೆದರೂ ಅಭಿವೃದ್ದಿಗೆ ನಯಾಪೈಸೆ ಹಣ ನೀಡಿಲ್ಲ. ಮತ ನೀಡಿದ ಜನ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಪ್ರಬಲವಾಗಿ ಹೋರಾಟ ನಡೆಸಲಿದೆ” ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಹೆಚ್ ಹುಚ್ಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಭೈರಪ್ಪ, ಯುವಮೋರ್ಚಾ ಅಧ್ಯಕ್ಷ ಯಶಸ್.  ಶಾಸಕ ಬಿ ಸುರೇಶಗೌಡ, ನಗರ ಮಂಡಲ ಅಧ್ಯಕ್ಷ ಹನುಮಂತರಾಜು,ಸತ್ಯಮAಗಲ ಜಗದೀಶ್, ಓಬಿಸಿ ಕಾರ್ಯಕಾರಿಣಿ ಸದಸ್ಯ ಎಸ್.ಪಿ.ಚಿದಾನಂದ್, ವಿನಯ್‌ಬಿದರೆ, ಗುರುಕುಲ ಮಲ್ಲಿಕಾರ್ಜುನಯ್ಯ, ಸಂದೀಪಗೌಡ,ರುದ್ರೇಶ್, ಪಾಲಿಕೆ ವಿರೋಧ ಪಕ್ಷದ ನಾಯಕ ವಿಷ್ಣುವರ್ಧನ್, ಸದಸ್ಯರಾದ ರಮೇಶ್, ಮಲ್ಲಿಕಾರ್ಜುನಯ್ಯ,ಸಿದ್ದೇಗೌಡ, ಕುಮಾರ್, ವಿಜಯಕುಮಾರ್,ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅಂಬಿಕಾ ಹುಲಿನಾಯ್ಕರ್,ಸರೋಜಗೌಡ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...