ತುಮಕೂರು | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಲು ಆಗ್ರಹ

Date:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ತುಮಕೂರು ನಗರ ಕಾಂಗ್ರೆಸ್ ಘಟಕದ ವತಿಯಿಂದ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಅನುಮತಿ ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದರು.

ತುಮಕೂರು ನಗರದ ಜಿ.ಜಿ.ಎಸ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ರಾಜ್ಯಪಾಲರ ವಿರುದ್ದ ಘೋಷಣೆ ಕೂಗುತ್ತಾ, ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಓರ್ವ ಜನಾನುರಾಗಿ ಸರ್ಕಾರದ ಯೋಜನೆಗಳ ಮೂಲಕ ಎಲ್ಲಾ ತಳಸ್ತರದ ಜನರಿಗೆ ಅನುಕೂಲ ಕಲ್ಪಿಸಿ, ನಾಡಿನ ಅಭಿವೃದ್ದಿಯಲ್ಲಿ ಅವರು ಸಹ ಪಾಲುದಾರರಾಗುವಂತೆ ಮಾಡಿದ್ದರು. ಇದನ್ನು ಸಹಿಸದ ಕೆಲವರು ಕುತಂತ್ರ ಮಾಡಿ 2021-22 ರಲ್ಲಿ ಬಿಜೆಪಿ ಪಕ್ಷದವರೆ ಅಧಿಕಾರದಲ್ಲಿದ್ದಾಗ ಹಂಚಿಕೆ ಮಾಡಿದ ಮುಡಾ ಬದಲಿ ನಿವೇಶನ ಹಂಚಿಕೆ ಮಾಡಿ, ಈಗ ಮುಖ್ಯಮಂತ್ರಿಗಳ ಮೇಲೆ ಗೂಬೆ ಕೂರಿಸಲು ಹೊರಟಿದ್ದಾರೆ. 2023 ರ ಚುನಾವಣೆ ವೇಳೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಪ್ರಣಾಳಿಕೆ ನೀಡಿದ್ದ ಐದು ಗ್ಯಾರಂಟಿಗಳು ಈ ನಾಡಿನ ಬಡವರ ಪಾಲಿಗೆ ಭದ್ರತೆ ನೀಡಿವೆ. ಇದನ್ನು ಸಹಿಸಲಾಗದೆ ಈ ರೀತಿಯ ವಾಮಮಾರ್ಗದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗೆ ಇಳಿಸಲು ಮುಂದಾಗಿದ್ದಾರೆ. ಇದಕ್ಕೆ ಎಂದಿಗೂ ಪಕ್ಷದ ಕಾರ್ಯಕರ್ತರು ಅವಕಾಶ ಮಾಡಿಕೊಡುವುದಿಲ್ಲ. ಅವಶ್ಯವಿದ್ದರೆ ಎಂತಹ ಹೋರಾಟಕ್ಕೂ ಸಿದ್ದ. ಕೂಡಲೇ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿ.ಪಂ. ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ, ಒಂದು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ತ್ರವಾಗಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡು ಇನ್ನಿಲ್ಲದ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವಲ್ಲದೆ ಸಾರ್ವಜನಿಕರು ಸಹ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಸರ್ಕಾರವನ್ನು ಪತನಗೊಳಿಸಿ, ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಮೈತ್ರಿ ಪಕ್ಷಗಳ ಅಟಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.

ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಮಾತನಾಡಿ, 2023 ರಲ್ಲಿ ಅಪಾರ ಜನ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದು ಎರಡನೆಯ ಬಾರಿಗೆ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಬಡವರು, ದೀನದಲಿತರು, ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುಕೂಲ ಮಾಡಿದರು. ಇದರಿಂದ ಹತಾಶೆಗೊಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಕಾಲದಲ್ಲಿ ಆಗಿರುವ ಹಗರಣವನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಮುಂದಾಗಿದೆ. ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಶೋಷಿತ ಸಮುದಾಯಗಳ ಜನರು ಅಧಿಕಾರ ಹಿಡಿದ ಸಂದರ್ಭದಲ್ಲಿ ಇಲ್ಲಸಲ್ಲದ ಹಗರಣಗಳ ಹೆಸರಿನಲ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡುತ್ತಾ ಬಂದಿವೆ. ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ ಸೇರಿದಂತೆ ಹಲವರು ಈ ಕುತಂತ್ರಕ್ಕೆ ಬಲಿಯಾಗಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರ ನಿಲ್ಲಲಿದೆ ಎಂದರು.

ಈ ಸಂಬಂಧ ಮನವಿಯನ್ನು ತಹಶಿಲ್ದಾರ್ ಸಿದ್ದೇಶ್ವರ್‌ರವರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಸ್. ಷಫಿ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಹೇಶ್, ಫಯಾಜ್, ಪಾಲಿಕೆ ಮಾಜಿ ಸದಸ್ಯರಾದ ಇನಾಯತ್, ನಯಾಜ್ ,ಎನ್. ಮಹೇಶ್. ನಿಖೇತರಾಜ್ ಮೌರ್ಯ, ಮಾಜಿ ಮೇಯರ್ ಪ್ರಭಾವತಿ ಸುಧೀಶ್ವರ್, ಗುರುಪ್ರಸಾದ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ವಿವಿಧ ಜಯಂತಿ ಆಚರಣೆ ಪೂರ್ವಭಾವಿ ಸಭೆ

ತುಮಕೂರು ಜಿಲ್ಲಾಡಳಿತದಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು...