ತುಮಕೂರು | ಪಾವಗಡ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯ

Date:

ಮಳೆಯ ಅಭಾವದಿಂದ ಅತ್ಯಂತ ಸಂಕಷ್ಟ ಎದುರಾಗಿದ್ದು, ತುಮಕೂರು ಜಿಲ್ಲೆ ಪಾವಗಡ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ತಾಲೂಕು ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ಪೂಜಾರಪ್ಪ ನೇತೃತ್ವದಲ್ಲಿ ತಾಲೂಕು ರೈತ ಸಂಘದಿಂದ ಕಂದಾಯ ಇಲಾಖೆಯ ಗ್ರಿಡ್ 2 ತಹಶೀಲ್ದಾ‌ರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಶಾಖೆಯ ಅಧ್ಯಕ್ಷ ದೊಡ್ಡಹಟ್ಟಿ ಪೂಜಾರಪ್ಪ ಮಾತನಾಡಿ, “ಜೀವನ ಸಾಗಿಸಲು ನಮಗೆ ಪರ್ಯಾಯ ವ್ಯವಸ್ಥೆಯಿಲ್ಲ. ಯಾವುದೇ ಕೈಗಾರಿಕೆ ಆಗಲಿ ಅಥವಾ ನದಿ ಮೂಲದ ನೀರಿನ ಸೌಲಭ್ಯ ಆಗಲಿ ಇಲ್ಲ. ಬಹುತೇಕ ಮಳೆ ಆಶ್ರಿತ ಬೆಳೆಗಳೇ ಜೀವನಾಂಶದ ಬೆಳೆಗಳಾಗಿದ್ದು, ಮಳೆಯ ಅಭಾವದಿಂದ ಶೇಂಗಾ, ತೊಗರಿ, ಭತ್ತ, ರಾಗಿ, ಜೋಳದ ಬೆಳೆಗಳು ಮೊಳಕೆ ಹಂತದಲ್ಲಿ ನಷ್ಟಕ್ಕೀಡಾಗಿದೆ. ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳು ಬತ್ತಿದ್ದು, ನೀರಾವರಿ ಬೆಳೆಗಳು ಒಣಗಿ ಹೋಗುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆಯ ಕೊರತೆಯಿಂದ ಸದಾ ಬರಗಾಲ ಎದುರಾಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ಮಳೆಯ ಅಭಾವದಿಂದ ಪ್ರಸಕ್ತ ಸಾಲಿಗೆ ಎಲ್ಲ ರೀತಿಯ ಬೆಳೆಗಳು ಒಣಗಿ ಹೋಗಿದ್ದು, ಜೀವನ ನಡೆಸುವುದು ಅಸಾಧ್ಯವಾಗಿದೆ. ಕಳೆದ ವರ್ಷ ಅತಿವೃಷ್ಟಿ ಹಾಗೂ ಪ್ರಸ್ತುತ ಅನಾವೃಷ್ಟಿಯ ಪರಿಣಾಮ ಕಸಬಾ ಹೋಬಳಿ, ವೈ ಎನ್ ಹೊಸಕೋಟೆ, ನಿಡಗಲ್, ನಾಗಲಮಡಿಕೆ ಸೇರಿ ತಾಲೂಕಿನ ನಾಲ್ಕು ಹೋಬಳಿಯ ರೈತರು ಮತ್ತು ಕೂಲಿಕಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿ, ಅನೇಕ ರೀತಿಯ ಸಮಸ್ಯೆ ಎದುರಿಸುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜೀವನಕ್ಕಾಗಿ ಸಾವಿರಾರು ಮಂದಿ ಬೆಂಗಳೂರು, ಆಂಧ್ರದ ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಪ್ರಸಕ್ತ ಸಾಲಿಗೆ ಬರದ ತೀವ್ರತೆ ವ್ಯಾಪಕವಾಗಿ ಕಾಡುತ್ತಿದ್ದು, ಕುಡಿವ ನೀರಿನ ಅಭಾವ ಸೃಷ್ಟಿಯಾಗುತ್ತಿದೆ. ಕುಡಿಯಲು ನೀರು ಸಿಗುತ್ತಿಲ್ಲ. ಪ್ರಾಣಿ ಪಕ್ಷಿಗಳ ನರಳಾಟ ಹೆಚ್ಚಾಗಿ ನೀರು ಮತ್ತು ಆಹಾರಕ್ಕಾಗಿ ಊರುಗಳಿಗೆ ಪ್ರವೇಶಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಬರಪೀಡಿತ ಪಟ್ಟಿಯಿಂದ ಪಾವಗಡವನ್ನು ಕೈಬಿಟ್ಟಿದ್ದು, ದುರಂತವೇ ಸರಿ. ಕೂಡಲೇ ತಾಲೂಕಿನ ಸ್ಥಿತಿಗತಿಯ ಸಮಗ್ರ ವರದಿ ಪಡೆದು ಕೂಡಲೇ ಬರಪೀಡಿತ ಪ್ರದೇಶ ವ್ಯಾಪ್ತಿಗೆ ಒಳಪಡಿಸುವ ಮೂಲಕ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಈರುಳ್ಳಿ ಬೆಳೆ ನಾಶ; ರೈತ ಆತ್ಮಹತ್ಯೆ

ರೈತ ಮುಖಂಡರುಗಳಾದ ಈರಕ್ಯಾತಪ್ಪ, ಚಿತ್ತಯ್ಯ, ಕೆ ಜಿ ಸಿದ್ದಪ್ಪ, ಹನುಮಂತರಾಯಪ್ಪ, ಸದಾಶಿವಪ್ಪ, ಈರಣ್ಣ, ರಾಮಾಂಜಿನಪ್ಪ, ನಾಗರಾಜಪ್ಪ, ರಮೇಶ್‌ ಕುಮಾರ್, ಮಂಜುನಾಥ್, ರೈತ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ: ಕೆ.ಎನ್ ರಾಜಣ್ಣ

ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ....

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...