ತುಮಕೂರು | ನಮಗೆ ಹಣದ ಬದಲು 10 ಕೆ.ಜಿ ಅಕ್ಕಿ ಕೊಡಿ; ಸಚಿವರಿಗೆ ರೈತರ ಮನವಿ

Date:

ಪ್ರಸ್ತುತ ಐದು ಕೆ.ಜಿ ಅಕ್ಕಿ ಮತ್ತು ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಇದರಿಂದ ಹೊಟ್ಟೆ ತುಂಬಾ ಊಟ ಮಾಡೋಕೆ ಆಗುತ್ತಿಲ್ಲ. ನಮಗೆ ಹಣದ ಬದಲು 10 ಕೆ.ಜಿ ಅಕ್ಕಿಯನ್ನೇ ಕೊಡಿ ಎಂಧು ರೈತರೊಬ್ಬರು ಜನತಾದರ್ಶನದಲ್ಲಿ ಸಚಿವರ ಬಳಿ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಅವರು ಜನತಾದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಈ ವೇಳೆ, ಸಚಿವರಿಗೆ ತಮ್ಮ ಮನವಿ ಸಲ್ಲಿಸಿದ ರೈತರೊಬ್ಬರು ನಮಗೆ ಹಣ ಬೇಡ, ಅಕ್ಕಿಯನ್ನೇ ಕೊಡಿ ಎಂದು ಕೇಳಿದ್ದಾರೆ.

ಇನ್ನು, ರೈತರಿಗೆ ಸರಿಯಾಗಿ ಬೆಳೆ ವಿಮೆ ನೀಡಲಾಗಿಲ್ಲವೆಂದು ಕೃಷಿ ಅಧಿಕಾರಿಗಳ ವಿರುದ್ಧ ಸಚಿವರು ಸಿಟ್ಟಾಗಿದ್ದರು. ಜನತಾದರ್ಶನಕ್ಕೆ ಸರಿಯಾಗಿ ತಯಾರಿ ನಡೆಸಿಲ್ಲವೆಂದು ತಹಶೀಲ್ದಾರ್‌ ವಿಶ್ವನಾಥ್ ಅವರನ್ನು ತರಾಟೆಗೆ ತೆಗೆದುಕೊಂಡರು. “ರಜೆ ಪ್ರವಾಸಕ್ಕೆ ಬರುವಂತೆ ಬಂದಿದ್ದೀರಾ? ಏನ್ ಸಿದ್ದತೆ ನಡೆಸಿದ್ದೀರಾ?” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನತಾದರ್ಶನದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...