ತುಮಕೂರು | ಗುಬ್ಬಿ ತಹಶೀಲ್ದಾರ್ ವಿರುದ್ದ ರೈತಸಂಘ ಕಿಡಿ

Date:

ಮಹಿಳಾ ಅಧಿಕಾರಿಗಳು ಬಂದರೆ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಾರೆಂಬ ನಂಬಿಕೆ ಗುಬ್ಬಿ ತಾಲೂಕಿನಲ್ಲಿ ಹುಸಿಯಾಗಿದೆ. ಅಧಿಕಾರಿಗಳು ಕಾಸಿಲ್ಲದೆ ಯಾವ ಕೆಲಸವನ್ನೂ ಮಾಡುತ್ತಿಲ್ಲ. ನಮ್ಮ ಆರೋಪ ಸುಳ್ಳಾಗಿದ್ದರೆ ಅವರು ಬಂದು ಆಣೆ-ಪ್ರಮಾಣ ಮಾಡಲಿ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಗೌಡ ಹರಿಹಾಯ್ದಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ತಾಲೂಕಿಗೆ ತಹಶೀಲ್ದಾರ್ ಆರತಿ ಬಿ ಅವರು ಬಂದು ಎರಡು ವರ್ಷ ಕಳೆದಿವೆ. ಆದರೂ, ಯಾವುದೇ ಪ್ರಗತಿ ಕಂಡಿಲ್ಲ. ಕೇವಲ ‘ಹೋದ ಪುಟ್ಟ – ಬಂದ ಪುಟ್ಟ’ ಎಂಬಂತೆ ಅವರು ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸರ್ಕಾರದ ಯಾವುದೇ ಆದೇಶಗಳನ್ನು ತಹಶೀಲ್ದಾರ್ ಪಾಲಿಸುತ್ತಿಲ್ಲ. ಕೆಲಸದಲ್ಲಿ ಪ್ರಗತಿಯನ್ನು ಕಾಣುತ್ತಿಲ್ಲ. ಅಹವಾಲು ಹಿಡಿದು ಕಚೇರಿಗೆ ಬರುವ ಸಾರ್ವಜನಿಕರ ತಲೆ ಸವರಿ ಕಳುಹಿಸುತ್ತಾರೆ. ಸ್ಮಶಾನ, ಶಾಲೆಗೆ ಸರ್ಕಾರದಿಂದ ಸ್ಥಳ ಮಂಜೂರಾದರೂ ಆ ಭೂಮಿಯನ್ನು ಹದ್ದುಬಸ್ತು ಮಾಡಿ, ಗ್ರಾಮ ಪಂಚಾಯತಿಗೆ ಹಸ್ತಾಂತರಿಸುವ ಕೆಲಸಗಳೂ ಆಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಭೂ ಕಬಳಿಕೆ ಹಗರಣದಲ್ಲಿ ರಾಜ್ಯದಲ್ಲೇ ನಮ್ಮ ತಾಲೂಕು ಕಚೇರಿ ಕುಖ್ಯಾತಿ ಪಡೆದಿದೆ. ದಲ್ಲಾಳಿಗಳು, ಕಬಳಿಕೆದಾರರಿಂದ ಕಚೇರಿ ತುಂಬಿ ತುಳುಕುತ್ತಿದೆ. ಸರ್ವೇ ಇಲಾಖೆ ಸಹ ಲಂಚದ ಹಿಂದೆ ಬಿದ್ದಿದೆ. ಬಗರ್‌ಹುಕುಂ ಸಾಗುವಳಿದಾರರ ಅಹವಾಲನ್ನೂ ಕೇಳುವವರು ಇಲ್ಲದಂತಾಗಿದೆ” ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರೈತಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ಜಗದೀಶ್, ಮುಖಂಡರಾದ ವೆಂಕಟೇಶ್, ಬಸವರಾಜು, ಯತೀಶ್, ಶಿವಣ್ಣ, ಸತ್ತಿಗಪ್ಪ, ಮಹದೇವ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...