ತುಮಕೂರು | ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ; ಓರ್ವ ಸಾವು

Date:

ಹೆಜ್ಜೇನು ದಾಳಿಯಿಂದ ಒರ್ವ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್‌ ಬಳಿ ನಡೆದಿದೆ. 47ವರ್ಷದ ವೀರಭದ್ರಯ್ಯ ಮೃತ ವ್ಯಕ್ತಿ.

ತಾಲೂಕಿನ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ದಿಢೀರನೆ ಹೆಜ್ಜೇನುನೋಣಗಳು ದಾಳಿ ನಡೆಸಿವೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆಯ ನಡೆಸಿದ್ದು, ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...