ತುಮಕೂರು | ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

Date:

ಸಂವಿಧಾನವೇ ನಮಗೆ ಧರ್ಮ ಗ್ರಂಥ. ಈ ಗ್ರಂಥದ ಮೂಲಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಪ್ರಯತ್ನವನ್ನು ಸರ್ಕಾರಗಳು ಮಾಡಬೇಕು. ಇದೇ ಸರ್ಕಾರದ ಆಶಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ನಡೆದ ಡಾ. ಶಿವಕುಮಾರ ಮಹಾಶಿವಯೋಗಿಗಳ 5ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದಲ್ಲಿ ಸಮಾರಂಭ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿ, ವರ್ಗರಹಿತವಾದ ವೈಚಾರಿಕತೆಯಿಂದ ಕೂಡಿದ ಸಮಾಜ ನಿರ್ಮಾಣ ಮಾಡಲು ಈ ನಾಡಿನಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ. ಬಸವಣ್ಣನವರ ಅನೇಕ ಆದರ್ಶ ತತ್ವಗಳು ಎಂದೆಂದಿಗೂ ಪ್ರಸ್ತುತ. ಸಾಮಾಜಿಕ ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆಯನ್ನು ಬಸವಾದಿ ಶರಣರು ತಂದಿದ್ದು, ಇವರ ಹೋರಾಟದ ಆಶಯವನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವಾದಿ ಶರಣರ ಆದರ್ಶವನ್ನು ಕಾಯ, ವಾಚ, ಮನಸ ಮೈಗೂಡಿಸಿಕೊಂಡು ಅದರಂತೆ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಶಿವಕುಮಾರ ಸ್ವಾಮೀಜಿಯವರು ಮಾಡಿದ್ದಾರೆ. ಈ ಮೂಲಕ ನುಡಿದಂತೆ ನಡೆದಿದ್ದಾರೆ” ಎಂದರು.

“ಅಕ್ಷರ ಸಂಸ್ಕೃತಿಯಿಂದ ದೂರವಾದ ಜನರು ಸಮಾಜದಲ್ಲಿ ಶೋಷಣೆ, ದೌರ್ಜನಕ್ಕೆ ಒಳಗಾಗಿದ್ದಾರೆ. ಅಕ್ಷರ ಸಂಸ್ಕಾರ ಪಡೆದವರು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಸೇರಿದ್ದಾರೆ. ಈ ರೀತಿ ಅಕ್ಷರ ಜ್ಞಾನದ ಅಸಮಾನತೆಯಿಂದ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಉಂಟಾಗಿರುವುದನ್ನು ಇಂದಿಗೂ ನಾವು ಕಾಣಬಹುದಾಗಿದೆ” ಎಂದರು.

“ಮನುಷ್ಯ ಮನುಷ್ಯನನ್ನು ಗೌರವಿಸಬೇಕು, ಪ್ರೀತಿಸಬೇಕು. ದ್ವೇಷಿಸುವ ವಾತಾವರಣವಿರಬಾರದು. ಕಾಯಕ ಮತ್ತು ದಾಸೋಹ ಎರಡೂ ಸಹ ಜೀವನದ ಮೌಲ್ಯಗಳು‌. ಇದನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

“ಶಿಕ್ಷಣ ಎಲ್ಲರಿಗೂ ಸಿಗಬೇಕು. ಜ್ಞಾನವಿಕಾಸದಿಂದ ಮಾತ್ರ ನಾವು ಸಮಾಜದಲ್ಲಿ ಗೌರವದಿಂದ ಬದುಕಲು ಸಾಧ್ಯ ಎಂಬುದು ಶ್ರೀಗಳ ಅಭಿಮತವಾಗಿತ್ತು. ಅಂತೆಯೇ ಸಹಿಷ್ಣುತೆ, ಸಹಬಾಳ್ವೆಯನ್ನು ಜೊತೆಯಾಗಿಟ್ಟಕೊಂಡು ನಾವೆಲ್ಲರೂ ಬದುಕಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

“ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆಯಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾನುವಳ್ಳಿ-ಚನ್ನಗಿರಿ ಗಲಾಟೆಯಲ್ಲಿ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ; ಆರೋಪ

“ನಾವು ಬಸವಾದಿ ಶರಣರ ಆದರ್ಶದ ಮೇಲೆ ನಂಬಿಕೆ ಇಟ್ಟವರು. ಆದುದರಿಂದಲೇ ಸಮಾಜದಲ್ಲಿನ ಜನರಿಗಾಗಿ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬಲಾಗುತ್ತಿದೆ. ಪ್ರಸ್ತುತ ವರ್ಷ ₹38,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಾಗಿ ಖರ್ಚು ಮಾಡಲಾಗುತ್ತಿದೆ. ಮುಂದಿನ ವರ್ಷ ₹68,000 ಕೋಟಿ ಖರ್ಚು ಮಾಡಲಾಗುವುದು” ಎಂದು ತಿಳಿಸಿದರು.

ಈ ವೇಳೆ ಸಚಿವರುಗಳಾದ ಡಾ ಜಿ ಪರಮೇಶ್ವರ್, ಕೆ ಎನ್ ರಾಜಣ್ಣ, ಎಂ ಬಿ ಪಾಟೀಲ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...