ತುಮಕೂರು | ಜಗಳ ಬಿಡಿಸಲು ಬಂದ ಪೊಲೀಸರ ವಾಹನವನ್ನೇ ಕದ್ದೊಯ್ದ ಭೂಪ!

Date:

ಜಗಳ ಬಿಡಿಸಲು ಬಂದ ಪೊಲೀಸರ 112 ವಾಹನವನ್ನೇ ಕದ್ದೊಯ್ದು ಪೊಲೀಸರನ್ನು ಹೈರಾಣು ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು, ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾನಹಳ್ಳಿಯಲ್ಲಿ ಸಂಭವಿಸಿದ್ದು, ಮುನಿಯ ಎಂಬಾತ ಪೊಲೀಸರ ವಾಹನ ಹೊತ್ತೊಯ್ದಿದ್ದಾನೆ.

ಸೋಮವಾರ ರಾತ್ರಿ ಇಲ್ಲಿನ ಮುನಿಯ ಮತ್ತು ಆತನ ಸಹೋದರನ ನಡುವೆ ಜಗಳ ನಡೆಯುತ್ತಿತ್ತು. ಆಗ‌ ಮುನಿಯನ ಸಹೋದರ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಮನವಿ ಮಾಡಿದ್ದಾನೆ. ಸ್ಥಳಕ್ಕೆ ಬಂದ 112 ಪೊಲೀಸರು ಜಗಳ ಬಿಡಿಸಿ ಮುನಿಯನಿಗೆ ತಿಳಿ ಹೇಳಿದ್ದಾರೆ.

ಇದರಿಂದ ಕುಪಿತಗೊಂಡ ಮುನಿಯ ಪೊಲೀಸರು ಬಂದಿದ್ದ 112 ವಾಹನದ ಹಿಂಬದಿಯ ಗಾಜು ಹೊಡೆದು ಹಾಕಿದ್ದಾನೆ. ಪೊಲೀಸರು ಕಾರಿನಿಂದ ಇಳಿದು ಗಾಜು ಪರಿಶೀಲನೆ ಮಾಡುತ್ತಿದ್ದಾಗ. ಏಕಾಏಕಿ ಕಾರು ಹತ್ತಿದ ಮುನಿಯ ಕಾರನ್ನು ಚಲಾಯಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ತಾಂತ್ರಿಕ ಸಮಸ್ಯೆಯಿಂದ ʼಗೃಹಲಕ್ಷ್ಮಿ ಯೋಜನೆʼಗೆ ತೊಂದರೆ: ಯತೀಂದ್ರ ಸಿದ್ದರಾಮಯ್ಯ

ಈ ಅನಿರೀಕ್ಷಿತ ಘಟನೆಯಿಂದ ಕಕ್ಕಾಬಿಕ್ಕಿಯಾದ ಪೊಲೀಸರು ಇಡೀ ರಾತ್ರಿ ಮುನಿಯ ಹಾಗೂ 112 ವಾಹನವನ್ನು ಹುಡುಕಿದ್ದಾರೆ. ಕೊನೆಗೆ ಸತತ ಮೂರ್ನಾಲ್ಕು ಗಂಟೆಗಳ ಹುಡುಕಾಟದ ಬಳಿಕ ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಸಮೇತವಾಗಿ ಮುನಿಯ ಪತ್ತೆಯಾಗಿದ್ದಾನೆ. ಕೊನೆಗೂ‌ ಮುನಿಯನನ್ನು ಪತ್ತೆ ಮಾಡಿದ ಪೊಲೀಸರು 112 ವಾಹನವನ್ನು ಸುಪರ್ದಿಗೆ ಪಡೆದು, ಮುನಿಯನನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...