ತುಮಕೂರು | ಕಾಂಗ್ರೆಸ್‌ ನೊಂದ ಕಾರ್ಯಕರ್ತರ ಸಭೆ

Date:

ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ನಗರದ ಗುರು ಲೀಲಾ ಕಲ್ಯಾಣ ಮಂಟಪದಲ್ಲಿ ಪಕ್ಷದ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

“ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು ಮತ್ತು ಮುಖಂಡರನ್ನು ಶಾಸಕ ಷಡಕ್ಷರಿ ಅವರು ಕಡೆಗಣಿಸುತ್ತಿದ್ದಾರೆ. 2018ರ ಚುನವಣೆಯಲ್ಲಿ 35 ಸಾವಿರ ಮತ‌ಗಳ ಅಂತರದಲ್ಲಿ ಸೋತ‌ ಷಡಕ್ಷರಿಯವರು ಈ ಬಾರಿ 71 ಸಾವಿರ ಮತಗಳ ಅಂತರದಲ್ಲಿ ಗೆಲುವು ಪಡೆಯಲು ಕಾರ್ಯಕರ್ತರು ಮತ್ತು ಮುಖಂಡರು ಕಾರಣ ಎಂಬುದನ್ನು ಶಾಸಕರು ಮರೆತಿದ್ದಾರೆ” ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಲೋಕೇಶ್ವರ ಮಾತನಾಡಿ, “ತಾಲೂಕಿನಲ್ಲಿ ಅಭಿವೃದ್ಧಿ ಶೂನ್ಯವಾಗಿವೆ. ವೈಯಕ್ತಿಕ ಕಾಮಗಾರಿಗೆ ಆದ್ಯತೆ ನೀಡಿ ಕಾರ್ಯಕರ್ತರನ್ನು ಶಾಸಕ ಕೆ.ಷಡಕ್ಷರಿ ಕಡೆಗಣಿಸುತ್ತಿದ್ದಾರೆ. ಗೆದ್ದು ಎಂಟು ತಿಂಗಳಾದರೂ ಸೌಜನ್ಯಕ್ಕೂ ಕಾರ್ಯಕರ್ತರ ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಿಪಟೂರು ತಾಲ್ಲೂಕು ಆಡಳಿತ ಆಳಿ ತಪ್ಪಿದೆ. ಭ್ರಷ್ಟಾಚಾರ ಮಿತಿಮೀರಿದೆ. ಇದರಲ್ಲಿ ಶಾಸಕರ ಪಾಲು ಇದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಲೋಕಸಭೆ ಮತ್ತು ತಾಪಂ,ಜಿಪಂ ಚುನಾವಣೆ ಮುಂಚಿತವಾಗಿ ಶಾಸಕರ ಜೊತೆ ರಾಜ್ಯದ ನಾಯಕರು ಮಾತುಕತೆ ನಡೆಸಿ ಕಾರ್ಯಕರ್ತರಿಗೆ ಶಾಸಕರು ಸ್ಪಂದಿಸುವಂತೆ ಮಾಡಬೇಕು” ಎಂದು ಆಗ್ರಹಿಸಿದರು.

ಸಭೆಯಲ್ಲಿ ಮಾಜಿ ನಗರಸಭಾ ಉಪಾಧ್ಯಕ್ಷ ಸೊಪ್ಪು ಗಣೇಶ್, ಭಾರತಿ ಮಂಜುನಾಥ್, ಮುನ್ನ, ಲೋಕೇಶ್ವರ್ ಬೆಂಬಲಿಗರಾದ ರಂಗಾಪುರ ದೇವರಾಜು, ರೇಣು ಪಟೇಲ್, ಹೊನ್ನವಳ್ಳಿ ಏಜೆಸ್, ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಲೋಕೇಶ್ವರ್ ಅಭಿಮಾನಿಗಳು, ನೊಂದ ಕಾಂಗ್ರೆಸ್ ಕಾರ್ಯಕರ್ತರು, ಸಭೆಯಲ್ಲಿ ಭಾಗವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...