ತುಮಕೂರು | ಗುಂಪುಗಾರಿಕೆ ಸೃಷ್ಟಿಸುವ ಮುದ್ದಹನುಮೇಗೌಡರಿಗೆ ಪಕ್ಷನಿಷ್ಠೆಯಿಲ್ಲ: ನಾರಾಯಣಗೌಡ

Date:

ಮುದ್ದಹನುಮೇಗೌಡರು ಅಲೆಮಾರಿ ರಾಜಕಾರಣಿ. ಗುಂಪುಗಾರಿಕೆ ಸೃಷ್ಟಿಸುವ ಅವರಿಗೆ ಪಕ್ಷ ನಿಷ್ಠೆಯಿಲ್ಲ‌ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಸದಸ್ಯ ಎಚ್‌ಬಿಎಸ್ ನಾರಾಯಣಗೌಡ ಆರೋಪಿಸಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಮುದ್ದಹನುಮೇಗೌಡರು ಕೇವಲ ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಮಾಜಿ ಸಂಸದರ ನಿಲುವು‌ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಪಿಎಂ ಅವರು ಮೊದಲಿಗೆ ಜೆಡಿಎಸ್ ಪಕ್ಷ, ಆನಂತರ ಕಾಂಗ್ರೆಸ್, ಬಳಿಕ ಬಿಜೆಪಿ. ಈಗ ಮತ್ತೆ ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ಜೆಡಿಎಸ್ ಪಕ್ಷದಲ್ಲೇ ಅವರಿಗೆ ಸಿ ಫಾರಂ ನೀಡಿದ್ದರು. ಆ ನಂತರ ಕಾಂಗ್ರೆಸ್ ಪಕ್ಷ ಸೇರಿ ಸಂಸದರಾದರು. ಅವರಿಗೆ ಕಾಂಗ್ರೆಸ್ ಪಕ್ಷದ ನಿಷ್ಠೆ ಇದ್ದಿದ್ದರೆ ಸಂಸದರಾಗಿ ಅಧಿಕಾರ ಹೊಂದಿದವರು ಪಕ್ಷವನ್ನು ಬಿಟ್ಟು ಬಿಜೆಪಿಗೆ ಹೋಗುತ್ತಿರಲಿಲ್ಲ. ಬಿಜೆಪಿಗೆ ಸೇರ್ಪಡೆಯಾದ ಅವರು ಮತ್ತೆ ಲೋಕಸಭಾ ಚುಣಾವಣೆಗೆ ಅಭ್ಯರ್ಥಿ ಆಕಾಂಕ್ಷಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಇವರೊಬ್ಬ ಸ್ಪಷ್ಟ ನಿಲುವಿಲ್ಲದ ರಾಜಕಾರಣಿ” ಎಂದು ವ್ಯಂಗ್ಯವಾಡಿದರು.

“ಜಿಲ್ಲೆಯಲ್ಲಿ ಅನೇಕ ಹಿರಿಯ ನಾಯಕರಿದ್ದಾರೆ. ಅದರಲ್ಲಿ ಡಾ.ಜಿ ಪರಮೇಶ್ವರ್ ಕೂಡ ಒಬ್ಬರು. ಜಿಲ್ಲೆಯಲ್ಲಿ ಅವರಿಗೆ ಹೆಸರಿದೆ. ನಾನೂ ಕೂಡ ಅವರ ಅಭಿಮಾನಿ. ಅವರನ್ನು ಚುನಾವಣೆ ಕಣಕ್ಕಿಳಿಸಿದರೂ ನಾವು ಗೆಲ್ಲಿಸುತ್ತೇವೆ ಅಥವಾ ಆರ್ ನಾರಾಯಣ್ ಅವರಂತಹ ಧೀಮಂತ ನಾಯಕರಿಗೆ ಲೋಕಸಭಾ ಅಭ್ಯರ್ಥಿಯನ್ನಾಗಿ ಜಿಲ್ಲೆಗೆ ಕಣಕ್ಕಿಳಿಸಲಿ” ಎಂದು ಬೆಂಬಲ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅನಂತ ಕುಮಾರ್ ಹೇಳಿಕೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್‌ ಮುಖಂಡ ದೀಪಕ್

“ಹಿಂದೆ ಕಾಂಗ್ರೆಸ್ಸಿನಲ್ಲಿದ್ದಾಗ ನೋಡಿದರೆ ಪಕ್ಷ ಸಂಘಟನೆಗೆ ಬದಲು ಕಾರ್ಯಕರ್ತರಲ್ಲೇ ಗುಂಪುಗಾರಿಕೆಗಳನ್ನು ಸೃಷ್ಟಿಸುತ್ತಿದ್ದರು. ಇದರಿಂದ ಪಕ್ಷದ ಬಲವರ್ಧನೆ ಹೇಗೆ ಸಾಧ್ಯವಾಗುತ್ತದೆ. ಈಗ ಪಕ್ಷಕ್ಕೆ ಬಂದರೂ ಗುಂಪುಗಾರಿಕೆ ಮಾಡುವುದರಲ್ಲಿ ಅನುಮಾನವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...