ತುಮಕೂರು | ಉದ್ಯೋಗದ ಹಕ್ಕು ಕಸಿಯುತ್ತಿರುವ ವಿಬಿ- ಜಿ ರಾಮ್ ಜಿ ಮಸೂದೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ : ಡಾ. ಜಿ. ಪರಮೇಶ್ವರ್

Date:

ಕೇಂದ್ರ ಸರ್ಕಾರವು ವಿ-ಬಿಬಿ ರಾಮ್ ಜಿ ಮಸೂದೆಯನ್ನು ಜಾರಿಗೆ ತರುವ ಮೂಲಕ ಸಂವಿಧಾನ ವಿರುದ್ಧವಾದ ತೀರ್ಮಾನವನ್ನು ಕೈಗೊಂಡಿದೆ. ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಭಾಗದ ಬಡವರಿಗೆ, ಮಹಿಳೆಯರಿಗೆ ಅನ್ಯಾಯವಾಗಲಿದೆ. ಕಾರ್ಪೋರೆಟ್ ಕಂಪನಿಗಳಿಗೆ ಮತ್ತು ಗುತ್ತಿಗೆದಾರರಿಗೆ ಅನುಕೂಲವಾಗಲಿದೆ. ಇದು ಜನವಿರೋಧಿ ತೀರ್ಮಾನ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆರೋಪಿಸಿದರು

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (MGNREGA) ರದ್ದುಗೊಳಿಸಿ, ವಿಬಿ-ಜಿ ರಾಮ್ ಜಿ ಮಸೂದೆಯನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ, ಎಐಸಿಸಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಜನಾಂದೋಲನ ಕುರಿತು ತುಮಕೂರಿನಲ್ಲಿ  ಸುದ್ದಿಗೋಷ್ಠಿ  ನಡೆಸಿ ಮಾತನಾಡಿದ ಅವರು,  ವಿ-ಬಿಬಿ ರಾಮ್ ಜಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರದ್ದು ಮಾಡಬೇಕು. ಮನರೇಗಾ ಯೋಜನೆಯನ್ನು ಅನುಷ್ಟಾನಗೊಳಿಸಿ, ಜನರ ಉದ್ಯೋಗದ ಹಕ್ಕನ್ನು ಪುನರ್‌ಸ್ಥಾಪಿಸಬೇಕು. ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಸ್ವಯಂ ಅಧಿಕಾರದ ಹಕ್ಕನ್ನು‌ ನೀಡಬೇಕು. ಮನರೇಗಾ ಯೋಜನೆಯ ಉದ್ಯೋಗದ ಕನಿಷ್ಟ 400 ರೂ. ದಿನಗೂಲಿಯನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಲಾಗುವುದು. ಬಡವರ ಹಕ್ಕನ್ನು ಕಸಿದಿರುವ ಕೇಂದ್ರ ಸರ್ಕಾರದ ನಿಲುವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದರು

ಮಾಜಿ‌ ಪ್ರಧಾನಿ ಮನಮೋಹನ್ ಸಿಂಗ್ ರವರ ನೇತೃತ್ವದ ಯುಪಿಎ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಿ, ಹಳ್ಳಿಗಾಡಿನ ಪ್ರತಿಯೊಬ್ಬರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ 2005ರಲ್ಲಿ ಮನರೇಗಾ ಯೋಜನೆಯನ್ನು ಪರಿಚಯಿಸಿ, ದೇಶದಾದ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದರು.  ಇಡೀ ಪ್ರಪಂಚದಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯಂತಹ ಉದ್ಯೋಗ ಕಲ್ಪಿಸುವ ಅತಿದೊಡ್ಡ ಯೋಜನೆಯನ್ನು ಯಾವ ದೇಶಗಳು ಜಾರಿಗೊಳಿಸಿಲ್ಲ ಎಂದು ವಿಶ್ವಬ್ಯಾಂಕ್ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಕೆ. ಎನ್. ರಾಜಣ್ಣ ಮಾತನಾಡಿ ಮಾಜಿ ಪ್ರಧಾನ ಮಂತ್ರಿಗಳು, ಆರ್ಥಿಕ ತಜ್ಞರಾದ ಡಾ.ಮನಮೋಹನ ಸಿಂಗ್ ಅವರು ಯು.ಪಿ.ಎ ಸರ್ಕಾರದ ಅಧಿಕಾರ ಅವಧಿಯಲ್ಲಿ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ” ಜಾರಿಗೆ ತಂದು, ಈ ದೇಶದ ಕೋಟ್ಯಂತರ ಬಡ ಕುಟುಂಬಗಳಿಗೆ ಆರ್ಥಿಕ ಬಲ ತುಂಬಿದರು. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಕೇಂದ್ರ ಸರ್ಕಾರದ ನಿಲುವಾಗಿದೆ. ಯು.ಪಿ.ಎ ಸರ್ಕಾರ ಇದ್ದ ಸಂದರ್ಭದಲ್ಲಿ ಜಾರಿಗೆ ತಂದ ಈ ಜನಪರ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕನ್ನು ಕಸಿದುಕೊಂಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದರು

ಕೇಂದ್ರ ಸರ್ಕಾರ ನೈತಿಕ ಬಲವೂ ಇಲ್ಲದ ವಿಬಿ- ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಗ್ರಾಮೀಣ ಭಾರತದ ಆರ್ಥಿಕತೆಗೆ ನೀಡುತ್ತಿರುವ ಕೊಡಲಿಯೇಟು. ಈ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪ್ತಿ “ನರೇಗಾ ಉಳಿಸಿ” ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು

ಸುದ್ದಿಗೋಷ್ಠಿಯಲ್ಲಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ, ಮಾಜಿ ಸಂಸದ ಎಸ್‌.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕರಾದ ಗಂಗಹನುಮಯ್ಯ, ಶಫಿ ಅಹ್ಮದ್, ಗೌರಿಶಂಕರ್, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹ್ಮದ್, ಕಿರಣ್ ಕುಮಾರ್, ರಾಮಕೃಷ್ಣ, ಪುರುಷೋತ್ತಮ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...