ತುಮಕೂರು | ಅಂಗನವಾಡಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಕಾಲಾವಕಾಶ : ಡಿಸಿ ಶುಭ ಕಲ್ಯಾಣ್‌

Date:

ತುಮಕೂರು ಜಿಲ್ಲೆಯಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿಯನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಅಂತಿಮಗೊಳಿಸಿದೆ.

ತುಮಕೂರು ಜಿಲ್ಲೆಯಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿಯನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಅಂತಿಮಗೊಳಿಸಿದೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿ ಸಂಬಂಧಿಸಿದ ಆಯ್ಕೆ ಸಮಿತಿ ಸಭೆ ಜಿಲ್ಲೆಯ ಎಲ್ಲ ಹತ್ತು ತಾಲೂಕುಗಳ ಅರ್ಜಿಗಳನ್ನು ಪರಿಶೀಲಸಿ ಅಂತಿಮಗೊಳಿಸಿತು.
2025 ಡಿಸೆಂಬರ್‌ 9ರಂದು ಜಿಲ್ಲೆಯ ಎಲ್ಲ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಜನವರಿ 9, 2026ಕ್ಕೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ನೀಡಲಾಗಿತ್ತು. ಪ್ರಸ್ತುತ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲೆಯ 11 ವಿಧಾನ ಸಭಾ ಕ್ಷೇತ್ರಗಳಲ್ಲಿ ಒಟ್ಟು 117 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿತ್ತು. ಒಟ್ಟು 3072 ಅರ್ಜಿಗಳು ಬಂದಿದ್ದು 444 ಅರ್ಜಿಗಳು ಪುರಸ್ಕೃತವಾಗಿವೆ, 2628 ತಿರಸ್ಕೃತವಾಗಿವೆ. ಉಳಿದ 9 ಕೇಂದ್ರಗಳಿಗೆ ಮರು ಪ್ರಕಟಣೆ ಮಾಡಬೇಕಿದೆ ಎಂದು ಆಯ್ಕೆ ಸಮಿತಿ ಅಧ್ತಕ್ಷರೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ 829 ಕೇಂದ್ರಗಳಿಗೆ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿತ್ತು. 3026 ಅರ್ಜಿಗಳು ಬಂದಿದ್ದು, 1316 ಅರ್ಜಿಗಳು ಅರ್ಹ ಅರ್ಜಿಗಳಾಗಿದ್ದವು, 1710 ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿವೆ. 225 ಕೇಂದ್ರಗಳಿಗೆ ಮರು ಪ್ರಕಟಣೆ ಹೊರಡಿಸಬೇಕಿದೆ ಎಂದು ಅವರು ತಿಳಿಸಿದರು.

ಎರಡೂ ಹುದ್ದೆಗಳಿಗೆ ಆಯ್ಕೆಯಾಗಿರುವ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ಅಂಗನವಾಡಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯ್ತಿ, ಅಂಗನವಾಡಿ ಕೇಂದ್ರ, ಆ ಊರಿನ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗುವುದು. ಆಕ್ಷೇಪಣೆಗಳಿದ್ದಲ್ಲಿ ಪ್ರಕಟಿಸಿದ ಏಳು ದಿನಗಳೊಳಗೆ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಏಳು ದಿನಗಳ ನಂತರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದರು.

ಆಯ್ಕೆ ಸಮಿತಿ ಸಭೆಯಲ್ಲಿ ಸಮಿತಿ ಉಪಾಧ್ಯಕ್ಷೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಸದಸ್ಯರಾದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಭಯ ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಾದ ರಘುಚಂದ್ರ, ಮಾಧವ ರೆಡ್ಡಿ, ತುಮಕೂರು ಮಹಾನರಪಾಲಿಕೆ ಆಯುಕ್ತೆ ಶುಭ, ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ ನಿರ್ದೇಶಕ ಡಾ.ಸಿದ್ದರಾಮಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...

ಗುಬ್ಬಿ | ಮೆದುಳು ಕ್ಯಾನ್ಸರ್‌ ಪೀಡಿತ ಬಾಲಕಿ ಮನೆಗೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರ ಭೇಟಿ

 ಮೆದುಳು ಕ್ಯಾನ್ಸರ್ ಚಿಕಿತ್ಸೆಗೆ ಸೂಕ್ತ ಚಿಕಿತ್ಸೆಗೆ ಆಧಾರ್ ಕಾರ್ಡ್ ಅಡ್ಡಿಯಾದ ಹಿನ್ನೆಲೆ...