ತುಮಕೂರು | ರೌಡಿಶೀಟರ್ ಹತ್ಯೆ ಪ್ರಕರಣ; ಹುಲಿಯೂರುದುರ್ಗ ಪಿಎಸ್‌ಐ ಅಮಾನತು

Date:

ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಹುಲಿಯೂರುದುರ್ಗ ಪಿಎಸ್‌ಐ ಸುನೀಲ್ ಕುಮಾ‌ರ್ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಆದೇಶಿಸಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಆಟೊ ರಾಮ ಮತ್ತು ಆತನ ಸಹಚರರು ಕಳೆದ ಡಿಸೆಂಬರ್‌ 30ರಂದು ರಾತ್ರಿ ಮತ್ತೊಬ್ಬ ರೌಡಿ ಶೀಟರ್ ಸುರೇಶ್ ಅಲಿಯಾಸ್ ಕ್ಯಾಪ್ಟನ್ ಸೂರಿ ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಢಿಕ್ಕಿ ಹೊಡೆದು, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಕಂಪಲಪುರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿದ್ದರು. ಈ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಬ್‌ ಇನ್ಸ್‌ಪೆಕ್ಟರ್ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಪಡಿಸಿ, ಎಸ್ಪಿ
ಕೆ.ವಿ.ಆಶೋಕ್ ಆದೇಶಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ತಪ್ಪಿತಸ್ಥ ಪೊಲೀಸರಿಗೆ ಎಸ್‌ಪಿ ಅಶೋಕ್ ಕೆ ವಿ ಅವರು ಅಮಾನತಿನ‌ ಶಿಕ್ಷೆ ನೀಡುವ ಮೂಲಕ ಕಾನೂನು ಎಲ್ಲರಿಗೂ ಒಂದೇ ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭರವಸೆ ಮೂಡಿಸುತ್ತಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದಲಿತ ಮಹಿಳೆ ಮೇಲೆ ಹಲ್ಲೆ; ಸವರ್ಣೀಯರ ವಿರುದ್ಧ ದೂರು ದಾಖಲು

“ಸಮಾಜ ಘಾತುಕರೊಂದಿಗೆ ಸೇರಿಕೊಂಡು ತಮ್ಮ ಕರ್ತವ್ಯಕ್ಕೆ ಹಾಗೂ ಸಮಾಜಕ್ಕೆ ದ್ರೋಹ ಬಗೆಯುವ ಅಧಿಕಾರಿಗಳಿಗೆ ಎಸ್‌ಪಿ ತಕ್ಕ ಪಾಠ ಕಲಿಸುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಸ್ವಚ್ಛ ಪೊಲೀಸ್ ವ್ಯವಸ್ಥೆ ಜಾರಿಗೆ ಎಸ್‌ಪಿ ಶ್ರಮಿಸುತ್ತಿದ್ದಾರೆ” ಎಂದು ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...