ತುಮಕೂರು | 1.80 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳವು

Date:

ತುಮಕೂರು ನಗರದ ಶಿರಾ ಗೇಟ್ ಬಳಿ ಬುಧವಾರ ತಡರಾತ್ರಿ ಸುಮಾರು 1.80 ಲಕ್ಷ ರೂ. ಮೌಲ್ಯದ 24 ಚೀಲ ಈರುಳ್ಳಿ ಕಳುವಾಗಿದೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈರುಳ್ಳಿ ವ್ಯಾಪಾರಿ ಮಹ್ಮದ್‌ ನೂರಲ್ಲ ಅವರು ಅ.30ರಂದು ಈರುಳ್ಳಿಯನ್ನು ಖರೀದಿಸಿ ತಂದಿದ್ದರು. ಅದರಲ್ಲಿ 61 ಚೀಲದಷ್ಟು ಮಾರಾಟ ಮಾಡಿದ್ದು, ಉಳಿದ 49 ಚೀಲ ಈರುಳ್ಳಿಯನ್ನು ತಮ್ಮ ಗೋಡೌನ್‌ನಲ್ಲಿಟ್ಟಿದ್ದರು. ಆದರೆ, ಮಾರನೆಯ ದಿನ ಗೋಡೌನ್‌ಗೆ ಬಂದು ನೋಡಿದಾಗ 24 ಚೀಲದಷ್ಟು ಈರುಳ್ಳಿ ಕಳ್ಳತನ ಆಗಿರುವುದು ಗೋತ್ತಾಗಿದೆ.

ಮಹ್ಮದ್‌ ನೂರಲ್ಲ ಅವರು ತಳ್ಳುವ ಗಾಡಿಯಲ್ಲಿ ಈರುಳ್ಳಿಯನ್ನು ನಗರದ ನಾನಾಕಡೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಶಿರಾ ಗೇಟ್‌ನ ಪುಟ್ಟಸ್ವಾಮಯ್ಯನಪಾಳ್ಯದ ಹತ್ತಿರ ಗೋಡೌನ್‌ ರೀತಿಯ ಶೆಡ್ ನಿರ್ಮಿಸಿ ಈರುಳ್ಳಿ ಸಂಗ್ರಹ ಮಾಡಿದ್ದರು. ಈರುಳ್ಳಿ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ಅವರು ಸಂಗ್ರಹಿಸಿಟ್ಟಿದ್ದ ಈರುಳ್ಳಿ ಕಳುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಟೊಮೆಟೊ ದರ ಹೆಚ್ಚಳವಾದಾಗ ಟೊಮೊಟೊ ಕಳ್ಳತನ ಪ್ರಕರಣ ಹೆಚ್ಚಾಗಿದ್ದವು. ಈಗ ಈರುಳ್ಳಿ ಕಳ್ಳತನ ಆಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...