ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

Date:

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ ಹದಿಹರೆಯದ ಮಕ್ಕಳ ಮೇಲೆ ದೌರ್ಜನ್ಯ ಎಸಗಿ ಅಟ್ಟಹಾಸ ಮೆರೆದು ಎಸ್ಕೇಪ್ ಆಗುತ್ತಿದ್ದ ಪಾಪಿಯನ್ನು ಹಿಡಿದ ಪೊಲೀಸರು ಆರೋಪಿಯ ಎಡೆಮುರಿ ಕಟ್ಟಿದ ಘಟನೆ ಗುಬ್ಬಿ ತಾಲ್ಲೂಕು ಹೊಸಹಳ್ಳಿಯಲ್ಲಿ ನಡೆದಿದೆ.

ಶಾಲಾ ಬಾಲಕಿಯ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದು, ಈ ಅಪರಿಚಿತನ ಬಂಧನಕ್ಕೆ ಪೊಲೀಸರಿಗೆ ಒಂದು ಸವಾಲ್ ಎದುರಾಯಿತು. ಯಾರಿಗೂ ಪರಿಚಯವಿಲ್ಲದ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿ 24 ಗಂಟೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಕಾಮುಕ ಆರೋಪಿಯನ್ನು ಗುಬ್ಬಿ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ತುಮಕೂರು ತಾಲ್ಲೂಕಿನ ಹಾಲನೂರು ಬಳಿಯ ಅದಲಾಪುರ ಗ್ರಾಮದ 26 ವರ್ಷದ ರೇಣುಕ ಎನ್ನಲಾಗಿದೆ. ಈತನ ಚರಿತ್ರೆ ಕೇಳಿದರೆ ಬೆಚ್ಚಿ ಬೀಳುವಂತಿದೆ. ದನದ ವ್ಯಾಪಾರಿಯಾದ ಆರೋಪಿ ಗುಬ್ಬಿ ತಾಲೂಕಿನ ಕೆ.ಜಿ ಟೆಂಪಲ್ ನಲ್ಲಿ ನಡೆಯುವ ದನಗಳ ಸಂತೆಗೆ ಬಂದಿದ್ದು ಮಾರ್ಗ ಮಧ್ಯೆ ಬರುವ ಜಿ.ಹೊಸಹಳ್ಳಿ ಗ್ರಾಮದಲ್ಲಿ ಶಾಲೆ ಮುಗಿಸಿಕೊಂಡು ಮಧ್ಯಾಹ್ನ ಮನೆಗೆ ತೆರಳುತ್ತಿದ್ದ ಏಳನೇ ತರಗತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಎಸ್ಕೇಪ್ ಆಗಿದ್ದ. ಅಮಾನವೀಯ ಘಟನೆಯ ಬಗ್ಗೆ ಗ್ರಾಮವೇ ಬೇಸರ ವ್ಯಕ್ತಪಡಿಸಿತ್ತು. ಫೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಒಂದು ದಿನದಲ್ಲಿ ಬಂಧಿಸಿದ ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅಟ್ಟಹಾಸ ಮೆರೆಯುವ ಪ್ರವೃತ್ತಿ ಬೆಳೆಸಿಕೊಂಡಿದ್ದ ಪಾಪಿ ಆರೋಪಿ ರೇಣುಕ ಈ ಹಿಂದೆ ತುಮಕೂರು ಗ್ರಾಮಾಂತರದಲ್ಲಿಯೂ ಇಂತಹದ್ದೇ ಕೃತ್ಯ ನಡೆಸಿ ಸಾರ್ವಜನಿಕವಾಗಿ ಧರ್ಮದೇಟು ತಿಂದಿದ್ದ. ಈಗಾಗಲೇ ಪೊಲೀಸ್ ಪ್ರಕರಣ ಈತನ ಮೇಲಿದೆ ಎನ್ನಲಾಗಿದೆ. ವಿವಾಹಿತ ಆರೋಪಿ ಪತ್ನಿ ಗರ್ಭಿಣಿ. ಆದರೂ ಇಂತಹ ಹೇಯ ಕೃತ್ಯ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ : ಮುರುಳೀಧರ ಹಾಲಪ್ಪ

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ...

ಗುಬ್ಬಿ | ತೋಟದಲ್ಲಿ ಮೇವಿನ ಮಧ್ಯೆ ಗಾಂಜಾ : ಮಾಲು ಸಮೇತ ಆರೋಪಿ ಬಂಧನ

 ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದ ಆರೋಪಿ ಬಗ್ಗೆ ಖಚಿತ ಮಾಹಿತಿ ಆಧರಿಸಿದ...

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...