ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

Date:

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಗೊಪ್ಪೇನಹಳ್ಳಿ ಗ್ರಾಮದ ನಿವಾಸಿ ಕಾಂತರಾಜು ಅವರ ಮಗ ಜಿ ಕೆ ಧನುಶ್ ಮೃತ. ಪಟ್ಟಣದ ಎಪಿಎಂಸಿ ಹಿಂಭಾಗದ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಸಾವಿಗೆ ಪ್ರೇಮವೈಫಲ್ಯ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಮೃತನು ಗುಡ್ಡೇನಹಳ್ಳಿ ಡಿಪ್ಲೋಮೋ ಕಾಲೇಜಿನಲ್ಲಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಬೆಳಗ್ಗೆ ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ತುರುವೇಕೆರೆಗೆ ಬಂದಿದ್ದಾನೆ. ಆದರೆ ಎರಡು ದಿನಗಳಿಂದ ಕಾಲೇಜಿಗೆ ಹೋಗಿರಲಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ. ಬುಧವಾರ ಬೆಳಗ್ಗೆಯೂ ಕಾಲೇಜಿಗೆ ಹೋಗುತ್ತೇನೆಂದು ಮನೆಯಿಂದ ಬಂದಿದ್ದ ಧನುಶ್‌ ಕೆಲ ಗಂಟೆಗಳ ನಂತರ ತನ್ನ ಸ್ಟೇಟಸ್‌ ನಲ್ಲಿ ನಾನು ಪ್ರಪಂಚದಿಂದ ದೂರ ಹೋಗುತ್ತಿದ್ದೇನೆ. ಎಲ್ಲರೂ ನನ್ನ ಹೆಣದ ಮೇಲೆ ಗುಲಾಬಿ ಹೂ ಹಾಕಿ ಖುಷಿಪಡಿ ಎಂದು ಹಾಕಿದ್ದನೆಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ (ಫೆ.25) ಸುಮಾರು 12 ಗಂಟೆಯ ಸುಮಾರಿಗೆ ಕೆರೆಯ ಬದಿಯಲ್ಲಿ ಆತನ ಬ್ಯಾಗ್‌, ಮೊಬೈಲ್‌ ಮತ್ತು ಚಪ್ಪಲಿ ಇದ್ದುದನ್ನು ಗಮನಿಸಿದ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆಗಾಗಲೇ ಮನೆಯವರು ಧನುಶ್ ಗೆ ಕರೆ ಮಾಡಿದರೂ ಸ್ವೀಕರಿಸದ ಕಾರಣ ಅನುಮಾನಗೊಂಡಿದ್ದಾರೆ. ಪೊಲೀಸರಿಂದ ವಿಷಯ ತಿಳಿದು ಧನುಶ್‌ ನ ಪೋಷಕರು ಕೆರೆಯ ಬಳಿ ಬಂದು ನೋಡಲಾಗಿ ಅಲ್ಲಿದ್ದ ಬ್ಯಾಗ್‌, ಚಪ್ಪಲಿ ಮತ್ತು ಪೋನ್‌ ಆತನದೇ ಎಂದು ಖಚಿತಪಡಿಸಿಕೊಂಡರು. ವಿಷಯ ತಿಳಿದು ಕುಟುಂಬದವರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಇದನ್ನೂ ಓದಿ: ತುಮಕೂರು | ನಂದಿಹಳ್ಳಿ, ಮಲ್ಲಸಂದ್ರ, ವಸಂತನರಸಾಪುರ ಔಟರ್‌ ರಿಂಗ್ ರಸ್ತೆ ಡಿಪಿಆರ್ ರೈತ ವಿರೋಧಿ : ಡಿ.ಸಿ.ಗೌರಿಶಂಕರ್

ತುರುವೇಕೆರೆ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ಕಬ್ಬಿಣದ ಕೊಕ್ಕೆಯಿಂದ ಒಂದೆರೆಡು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದರು. ಕೊನೆಗೂ ಧನುಶ್‌ ನ ಶವ ಪತ್ತೆಯಾಗಿದೆ. ಶವ ಹೊರತೆಗೆಯುತ್ತಿದ್ದಂತೆ ಮೃತ ಯುವಕನ ಸಂಬಂಧಿಕರ ರೋಧನ ಮುಗಿಲು ಮುಟ್ಟಿತು. ಪೊಲೀಸರು ಸ್ದಳದಲ್ಲಿದ್ದ ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 5 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಸಹಜ ಕೃಷಿಯ ಅಚ್ಚರಿ ನಡಿಗೆ ವಿಷಮುಕ್ತ ಆಹಾರದ ಕಡೆಗೆ

 ರೈತರು ಸಹಜ ಕೃಷಿಯತ್ತ ಮುಖ ಮಾಡಿ ವಿಷಮುಕ್ತ ತರಕಾರಿ, ಹಣ್ಣು, ಆಹಾರಗಳನ್ನು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...