ತುಮಕೂರು | ಜನವರಿ 29ರಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

Date:

ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ (ಡಿ.27) ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು, ಜನವರಿ 29ರಂದು ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದು, ಹೊಸದಾಗಿ ಪ್ರಾರಂಭಿಸಬೇಕಾಗಿರುವ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಶಿಲಾನ್ಯಾಸವನ್ನು ನೆರವೇರಿಸಿ ವಿವಿಧ ಯೋಜನೆಗಳಡಿ 30 ಸಾವಿರ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಿದ್ದಾರೆ.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ತಮ್ಮ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು.  ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಡಿಸೆಂಬರ್ 29ರಂದು ಮುಖ್ಯಮಂತ್ರಿ   ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ವಿವರವನ್ನು ತಪ್ಪದೇ ಈ ಸಭೆಗೆ ತರಬೇಕೆಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ನೀರು ಮತ್ತು ನೈರ್ಮಲ್ಯ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ಸ್ಮಾರ್ಟ್ ಸಿಟಿ, ಪಾಲಿಕೆ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿ ವಿವರಗಳುಳ್ಳ ಪಿಪಿಟಿಯನ್ನು ಸಿದ್ಧಪಡಿಸಬೇಕು ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಗ್ರಾಮೀಣ ಕೈಗಾರಿಕೆ, ಕಂದಾಯ, ಆರೋಗ್ಯ, ಕಾರ್ಮಿಕ ಮತ್ತು ಪಶು ಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧಿಕಾರಿಗಳು ತಮ್ಮ ಇಲಾಖೆಯಿಂದ ಫಲಾನುಭವಿಗಳಿಗೆ ವಿತರಿಸಲಾಗುವ ಸವಲತ್ತುಗಳ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಒದಗಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಹಾನಗರಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ. ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...