ತುಮಕೂರು | ಸಮ್ಮೇಳನದ ಆಶಯ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು : ಗೃಹ ಸಚಿವ ಡಾ.ಜಿ. ಪರಮೇಶ್ವರ್

Date:

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯಗಳು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು. ಜಿಲ್ಲೆಯ ಅಭಿವೃದ್ಧಿ, ಸಂಸ್ಕೃತಿ ಮತ್ತು ಭಾಷೆಗೆ ತಕ್ಕಂತೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ಸಮ್ಮೇಳನವು ಮಾರ್ಗದರ್ಶಕವಾಗಬೇಕು ಎಂದು ಗೃಹ ಸಚಿವ ಡಾ: ಜಿ. ಪರಮೇಶ್ವರ್ ಹೇಳಿದರು.

ಸೋಮವಾರ ನಗರದ ಗಾಜಿನಮನೆ ಆವರಣದಲ್ಲಿ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂ ಸಮಾಜಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳು ಚರ್ಚೆಗಳಾಗುತ್ತಿದ್ದು, ಅಂದಿನ ಸರ್ಕಾರಗಳಿಗೆ ಪರಿಣಾಮಕಾರಿ ಸಲಹೆ–ಸೂಚನೆಗಳನ್ನು ನೀಡಿದ ಇತಿಹಾಸವಿದೆ. ಅಂತೆಯೇ ಈ ಸಮ್ಮೇಳನ ಕೂಡ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಸಮ್ಮೇಳನಗಳ ನಿರ್ಣಯಗಳನ್ನು ಸರ್ಕಾರಗಳು ಕಡಿಮೆ ಮಟ್ಟದಲ್ಲಿ ಅಳವಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದ್ದರೂ ಕನ್ನಡ ನಾಡಿನ ಬೆಳವಣಿಗೆ ಕನ್ನಡಿಗರಿಂದಲೇ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಸಮ್ಮೇಳನದಲ್ಲಿ ಚರ್ಚೆಗೆ ಬರಲಿರುವ ಅನೇಕ ವಿಚಾರಗಳು ಜಿಲ್ಲೆಯ ಹಾಗೂ ರಾಜ್ಯದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ತಿಳಿಸಿದರು.

1915ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಶತಮಾನದ ಕಾಲದಿಂದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 1966ರಲ್ಲಿ ಆರಂಭಗೊಂಡು 60 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

1002587300

ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡ ಅವರು, 7ನೇ ತರಗತಿಯಲ್ಲಿ ಓದುತ್ತಿದ್ದಾಗ ಸಿದ್ಧಗಂಗಾ ಮಠದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸೇವಾದಳದ ವಿದ್ಯಾರ್ಥಿಯಾಗಿ ಭಾಗವಹಿಸಿದ್ದೆ. ಆ ಅನುಭವಗಳು ಇಂದಿಗೂ ನನ್ನ ಮನಸ್ಸಿನಲ್ಲಿ ಜೀವಂತವಾಗಿವೆ ಎಂದು ಹೇಳಿದರು.

ಕನ್ನಡ ಭಾಷೆಗೆ ಈಗಾಗಲೇ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು, ಕನ್ನಡವನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸಿರುವುದು ಕನ್ನಡ ನಾಡಿಗೂ ಕನ್ನಡಾಂಬೆಗೆ ಗೌರವ ತಂದುಕೊಟ್ಟ ಸಾಧನೆಗಳಾಗಿವೆ ಎಂದ ಅವರು, ಕನ್ನಡ ಸಾಹಿತ್ಯ ಸಮ್ಮೇಳನಗಳು ಕೇವಲ ಭಾಷೆಯ ರಕ್ಷಣೆಗೆ ಮಾತ್ರವಲ್ಲ, ಸಾಹಿತ್ಯದ ಬೆಳವಣಿಗೆಗೂ ಮಹತ್ತರ ಪಾತ್ರವಹಿಸಿವೆ. ಸಮ್ಮೇಳನಗಳು ಅನೇಕ ವಿವಾದಗಳ ನಡುವೆಯೂ ಕನ್ನಡ ಭಾಷೆಯನ್ನು ಸಾಹಿತ್ಯದ ಮೂಲಕ ಉಳಿಸಿ ಬೆಳೆಸಿವೆ ಎಂದು ಹೇಳಿದರು. 

ಇಡೀ ಜಗತ್ತಿನಾದ್ಯಂತ ಕನ್ನಡಿಗರು ಕನ್ನಡ ಭಾಷೆಯಷ್ಟೇ ಅಲ್ಲ, ನಮ್ಮ ಸಂಸ್ಕೃತಿಯನ್ನೂ ಜಗದಗಲ ಪ್ರಚಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇತ್ತೀಚೆಗೆ ನಾನು ಬೆಹ್ರಾನ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿ ಕನ್ನಡ ಸಂಘಟನೆಗಳ ಮೂಲಕ ದೊಡ್ಡ ಕಟ್ಟಡ ನಿರ್ಮಿಸಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುತ್ತಿರುವುದನ್ನು ಕಂಡೆ. ಅಲ್ಲಿನ ಮಕ್ಕಳಲ್ಲಿ ಕಲೆ ಮತ್ತು ಸಂಸ್ಕೃತಿಯ ಮೇಲಿನ ಆಸಕ್ತಿಯನ್ನು ನೋಡಿ ನಾನು ವೈಯಕ್ತಿಕವಾಗಿ ಒಂದು ಕೋಟಿ ರೂ.ಗಳನ್ನು ಸಂಘಕ್ಕೆ ನೀಡಿದ್ದೇನೆ. ಇಂತಹ ಕನ್ನಡ ಸೇವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.

ಬೆಂಗಳೂರಿನ ಮೂಲದ ನಾಸಾ ವಿಜ್ಞಾನಿ ಡಾ. ಸೀತಾರಾಮಯ್ಯ ಅವರು ಅಮೆರಿಕದಲ್ಲಿದ್ದರೂ ಕನ್ನಡದಲ್ಲೇ ಮಾತನಾಡುತ್ತಾರೆ. ಇದು ಕನ್ನಡದ ಶಕ್ತಿ ಮತ್ತು ಸಂಸ್ಕೃತಿಯ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದರು.

ತುಮಕೂರು ಜಿಲ್ಲೆ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ತುಮಕೂರಿಗೆ ಮೆಟ್ರೋ ರೈಲು ತರಲು ಈಗಾಗಲೇ ಸಮಗ್ರ ಯೋಜನಾ ವರದಿಗೆ ಅನುಮೋದನೆ ದೊರೆತಿದೆ. ಸುಮಾರು 20ಸಾವಿರ ಎಕರೆ ಪ್ರದೇಶದಲ್ಲಿ ದೇಶದ ಅತಿದೊಡ್ಡ ಕೈಗಾರಿಕಾ ವಲಯ ಸ್ಥಾಪನೆಯಾಗುತ್ತಿದೆ. ಜಿಲ್ಲೆಯಲ್ಲಿ 9 ಇಂಜಿನಿಯರಿಂಗ್ ಕಾಲೇಜುಗಳು, 3 ಮೆಡಿಕಲ್ ಕಾಲೇಜುಗಳಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿಯೂ ತುಮಕೂರು ಮಹತ್ವದ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ತಿಳಿಸಿದರು.

ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು, 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಅಗ್ರಹಾರ ಕೃಷ್ಣಮೂರ್ತಿ, ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...