ತುಮಕೂರು | ವಿವಿಧ ಜಯಂತಿ ಆಚರಣೆ ಪೂರ್ವಭಾವಿ ಸಭೆ

Date:

ತುಮಕೂರು ಜಿಲ್ಲಾಡಳಿತದಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಹಾಗೂ ಮಾರ್ಚ್ 31ರಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರು ಸಮುದಾಯದ ಮುಖಂಡರೊಂದಿಗೆ ಚರ್ಚಿಸುತ್ತಾ, ಮಾರ್ಚ್ 23ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀ ದೇವರದಾಸಿಮಯ್ಯ ಜಯಂತಿಯನ್ನು ನಗರದ ಕನ್ನಡ ಭವನ ಅಥವಾ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಚರಿಸಲು ನಿರ್ಧರಿಸಿದರು.

ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಮಾರ್ಚ್ 28ರಂದು ಸಂಜೆ 4.30 ಗಂಟೆಗೆ ನಗರದ ಅಗ್ರಹಾರದಲ್ಲಿರುವ ಶ್ರೀ ಕೋಟೆ ಕೊಲ್ಲಾಪುರದಮ್ಮ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಯಿತು. ಕಾರ್ಯಕ್ರಮದ ಪೂರ್ವದಲ್ಲಿ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಶ್ರೀ ಅಗ್ನಿಬನ್ನಿರಾಯಸ್ವಾಮಿಯ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಚಿಕ್ಕಪೇಟೆ ವೃತ್ತ, ಗಾರ್ಡನ್ ರಸ್ತೆ, ಮಾರುತಿ ವೃತ್ತ ಮಾರ್ಗವಾಗಿ ಸಮುದಾಯ ಭವನದವರೆಗೆ ನಡೆಸಲು ತೀರ್ಮಾನಿಸಲಾಯಿತು.
ಭಗವಾನ್ ಮಹಾವೀರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ 31ರಂದು ಬೆಳಿಗ್ಗೆ 10-30 ಗಂಟೆಗೆ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲು ನಿರ್ಧರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಜೈನ ಸಮುದಾಯದ ಸದಸ್ಯರು ಸೇರಿದಂತೆ ಇತರ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಯಂತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆಹ್ವಾನ ಪತ್ರಿಕೆಗಳನ್ನು ನಿಯಮಾನುಸಾರ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ನುರಿತ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಮುದಾಯದಲ್ಲಿ ಗಣನೀಯ ಸೇವೆ ಸಲ್ಲಿಸಿದ ಐದು ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...

ಗುಬ್ಬಿ | ಮೆದುಳು ಕ್ಯಾನ್ಸರ್‌ ಪೀಡಿತ ಬಾಲಕಿ ಮನೆಗೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರ ಭೇಟಿ

 ಮೆದುಳು ಕ್ಯಾನ್ಸರ್ ಚಿಕಿತ್ಸೆಗೆ ಸೂಕ್ತ ಚಿಕಿತ್ಸೆಗೆ ಆಧಾರ್ ಕಾರ್ಡ್ ಅಡ್ಡಿಯಾದ ಹಿನ್ನೆಲೆ...