ತುರುವೇಕೆರೆ | ಹೆಚ್ಚಿದ ಚಿರತೆ ಕಾಟ : ಭಯಭೀತರಾಗಿರುವ ಜನರು

Date:

ತುರುವೇಕೆರೆ ತಾಲೂಕಿನ ವಿವಿಧೆಡೆ ಚಿರತೆಯ ಕಾಟ ಅತಿಯಾಗಿದೆ. ಚಿರತೆ, ಕುರಿಗಳು ಮತ್ತು ನಾಯಿಯನ್ನು ಬಲಿ ತೆಗೆದುಕೊಳ್ಳುತ್ತಿದೆ. ಇದರಿಂದ ಜನರು ಆಘಾತಕ್ಕೊಳಗಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಕಾರ್ಯಾನ್ಮುಖವಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಲೂಕಿನ ಹರಿದಾಸನ ಬಳಿಯ ಚೇತನ್‌ ಕುಮಾರ್‌ ರವರ ತೋಟದಲ್ಲಿ ಸಾಕಲಾಗಿದ್ದ ಕುರಿ ಹಿಂಡಿನ ಮೇಲೆ ಚಿರತೆ ದಾಳಿ ಮಾಡಿ ಎರಡು ಕುರಿಗಳನ್ನು ಬಲಿ ತೆಗೆದುಕೊಂಡಿದೆ. ತೋಟದಲ್ಲಿ ಸ್ವಾಮಿ ಎಂಬುವವರು ಸಾಯಂಕಾಲದ ವೇಳೆ ಕುರಿಗಳನ್ನು ಕಾಯುತ್ತಿದ್ದರು. ಏಕಾಏಕಿ ಎರಡು ಚಿರತೆಗಳು ದಾಳಿ ಮಾಡಿ ಎರಡು ಕುರಿಗಳನ್ನು ಬಲಿ ತೆಗೆದುಕೊಂಡಿದೆ. ಚಿರತೆ ಒಂದು ಕುರಿಯ ಮೇಲೆ ದಾಳಿ ಮಾಡಿದೆ. ಕೂಡಲೇ ಓಡಿ ಹೋದ ಕುರಿಯ ಕಿವಿಯನ್ನು ಪಂಜದಿಂದ ಪರಚಿ ಗಾಯ ಮಾಡಿದೆ. ಒಂದು ಚಿರತೆ ಕುರಿಯ ರಕ್ತವನ್ನು ಹೀರಿ ಬಿಸಾಕಿ ಹೋಗಿದ್ದರೆ, ಇನ್ನೊಂದು ಚಿರತೆ ಕುರಿಯನ್ನು ಸ್ವಲ್ಪ ದೂರ ಕಚ್ಚಿಕೊಂಡು ಹೋಗಿ ಇಡೀ ದೇಹವನ್ನು ತಿಂದು ಪರಾರಿಯಾಗಿದೆ. ಕುರಿಗಳನ್ನು ಕಾಯುತ್ತಿದ್ದ ಸ್ವಾಮಿ ಜೀವಭಯದಿಂದ ಓಡಿ ಹೋಗಿ ಪ್ರಾಣ ರಕ್ಷಿಸಿಕೊಂಡಿದ್ದಾರೆ. 

1002705175

 ಚೇತನ್‌ ಕುಮಾರ್‌ ರವರ ತೋಟ ತುರುವೇಕೆರೆ – ಕೆಬಿ ಕ್ರಾಸ್‌ ನ ಎನ್‌ ಎಚ್.‌ 150 ರ ಹೆದ್ದಾರಿ ಪಕ್ಕದಲ್ಲೇ ಇದೆ. ಇವರ ತೋಟದ ಸಮೀಪವೇ ಹಳ್ಳಿಕಾರ್‌ ತಳಿ ಸಂವರ್ಧನಾ ಕೇಂದ್ರವೂ ಇದೆ. ಇಲ್ಲಿ ನೂರಾರು ರಾಸುಗಳು ಇವೆ. ಈ ಸಂವರ್ಧನಾ ಕೇಂದ್ರದಲ್ಲಿಯೂ ಚಿರತೆ ದಾಳಿ ಕೆಲವು ದನಕರುಗಳನ್ನು ಬಲಿ ತೆಗೆದುಕೊಂಡಿತ್ತು. ಬೋನು ಇಟ್ಟು ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಈಗ ಪುನಃ ಚಿರತೆಯ ಹಾವಳಿ ಅತಿಯಾಗಿದೆ. ಈ ಪ್ರದೇಶದಲ್ಲಿ ರೈತಾಪಿಗಳು ತಮ್ಮ ಮನೆಯಲ್ಲಿ ಸತ್ತ ಎಮ್ಮೆ, ಕೋಣ ಸೇರಿದಂತೆ ಇನ್ನಿತರೆ ಸತ್ತ ಸಾಕು ಪ್ರಾಣಿಗಳನ್ನು ಬಿಸಾಡಿ ಹೋಗುತ್ತಾರೆ. ಇದರಿಂದಾಗಿ ಚಿರತೆಯ ಹಾವಳಿ ಹೆಚ್ಚಾಗಲು ಕಾರಣವಾಗಿದೆ ಎಂದು ಹೇಳಲಾಗಿದೆ.  ಸ್ಥಳಕ್ಕೆ ಅರಣ್ಯ ಇಲಾಖಾ ಅಧಿಕಾರಿಗಳು, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಭೇಟಿ ನೀಡಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

  ಸಂಪಿಗೆ ಗ್ರಾಮದಲ್ಲಿರುವ ಹರಿಜನರ ಕಾಲೋನಿಯಲ್ಲಿರುವ ಕೆ.ಕೆ.ಕುಮಾರ್‌ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿದ್ದ ಕೊಬರಿ ದಾಸ್ತಾನು ಕೇಂದ್ರದ ಬಳಿ ಕಟ್ಟಿದ್ದ ನಾಯಿಯನ್ನು ಚಿರತೆ ರಾತ್ರಿ ವೇಳೆ ಬಂದು ತಿಂದು ಹಾಕಿದೆ. ಸಂಪಿಗೆ ಗ್ರಾಮದ ಒಳಗೇ ಬಂದು ಚಿರತೆ ದಾಳಿ ಮಾಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಬೋನನ್ನು ಇಡುವ ಮೂಲಕ ಚಿರತೆ ಸೆರೆಹಿಡಿಯಲು ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಚಿರತೆ ದಾಳಿ : ಕುಟುಂಬದವರಿಗೆ ಒಂದು ಲಕ್ಷ ನೀಡಿದ ದೊಡ್ಡಾಘಟ್ಟ ಚಂದ್ರೇಶ್‌

 ಚಿರತೆ ದಾಳಿಯಿಂದ ಮೃತಪಟ್ಟ ಅರೇಮಲ್ಲೇನಹಳ್ಳಿಯ ಸುಜಾಳ ರವರ ಕುಟುಂಬಕ್ಕೆ ರಾಜ್ಯ ಯುವ...

ತುರುವೇಕೆರೆ | ಬೋನಿಗೆ ಬಿದ್ದ ಚಿರತೆ : ಜನ ನಿರಾತಂಕ

ತುರುವೇಕೆರೆ  ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಭಾನುವಾರವಷ್ಠೇ ಮಹಿಳೆಯೋರ್ವರನ್ನು ಚಿರತೆ...

ತುರುವೇಕೆರೆ | ಚಿರತೆ ದಾಳಿಗೆ ಮಹಿಳೆ ಬಲಿ ; ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ : ಎಂ.ಟಿ ಕೃಷ್ಣಪ್ಪ

 ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ...

ತುರುವೇಕೆರೆ | ನರೇಗಾ ತಿದ್ದುಪಡಿ ಮಸೂದೆ ಹಿಂಪಡೆಯಲು ಕೆಆರ್‌ಎಸ್‌ ಪಕ್ಷದ ಎಲ್ ಜೀವನ್‌ ಆಗ್ರಹ

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ) ಹೆಸರನ್ನು ತಿದ್ದುಪಡಿ ಮಾಡಿರುವ...