ತುರುವೇಕೆರೆ | ಚಿರತೆ ದಾಳಿಗೆ ಮಹಿಳೆ ಬಲಿ ; ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ : ಎಂ.ಟಿ ಕೃಷ್ಣಪ್ಪ

Date:

 ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಜಾತ (48) ಅವರ ಕುಟುಂಬಕ್ಕೆ ಸೋಮವಾರ 5 ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರ ಚೆಕ್ಕನ್ನು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ವಿತರಿಸಿದರು.

ಮೃತರಿಗೆ ಒಬ್ಬ ಮಗ ಹಾಗೂ ಮಗಳಿದ್ದು, ಸೋಮವಾರ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು ಉಳಿದ 15 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಮುಂದಿನ ಎರಡು ವಾರಗಳಲ್ಲಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಕಸ ವಿಲೇವಾರಿ ವಾಹನಗಳ ಮೂಲಕ ಚಿರತೆ ಹಾವಳಿ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಸಾರ್ವಜನಿಕರು ಬೆಳಗಿನ ಜಾವ ಹಾಗೂ ಸೂರ್ಯಾಸ್ತದ ನಂತರ ತೋಟಗಳಿಗೆ ತೆರಳದಂತೆ ನಿರ್ದೇಶನ ನೀಡಿದರಲ್ಲದೇ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ 9449872599 (ಸ್ಮಾರ್ಟ್ ಸಿಟಿ ಸಹಾಯವಾಣಿ) ಸಂಖ್ಯೆಯನ್ನು 24/7 ಸಂಪರ್ಕಿಸಬಹುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಮೃತರ ಇಬ್ಬರು ಮಕ್ಕಳಲ್ಲಿ ಒಬ್ಬರ ಶಿಕ್ಷಣಕ್ಕಾಗಿ ಪ್ರತಿ ತಿಂಗಳು 4,000 ರೂ.ಗಳ ಧನಸಹಾಯ ಹಾಗೂ ಅರ್ಹತೆಗನುಗುಣವಾಗಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಕೆಲಸ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಕುಂಞ ಅಹಮದ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಹೊಣಕೆರೆ ಗೊಲ್ಲರಹಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ

ತುರುವೇಕೆರೆ ತಾಲೂಕಿನ ಹೊಣಕೆರೆ ಗೊಲ್ಲರಹಟ್ಟಿಯ ತೋಟದ ಸಾಲಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ...

ತುರುವೇಕೆರೆ | ಚಿರತೆ ದಾಳಿ : ಕುಟುಂಬದವರಿಗೆ ಒಂದು ಲಕ್ಷ ನೀಡಿದ ದೊಡ್ಡಾಘಟ್ಟ ಚಂದ್ರೇಶ್‌

 ಚಿರತೆ ದಾಳಿಯಿಂದ ಮೃತಪಟ್ಟ ಅರೇಮಲ್ಲೇನಹಳ್ಳಿಯ ಸುಜಾಳ ರವರ ಕುಟುಂಬಕ್ಕೆ ರಾಜ್ಯ ಯುವ...

ತುರುವೇಕೆರೆ | ಬೋನಿಗೆ ಬಿದ್ದ ಚಿರತೆ : ಜನ ನಿರಾತಂಕ

ತುರುವೇಕೆರೆ  ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಭಾನುವಾರವಷ್ಠೇ ಮಹಿಳೆಯೋರ್ವರನ್ನು ಚಿರತೆ...

ತುರುವೇಕೆರೆ | ನರೇಗಾ ತಿದ್ದುಪಡಿ ಮಸೂದೆ ಹಿಂಪಡೆಯಲು ಕೆಆರ್‌ಎಸ್‌ ಪಕ್ಷದ ಎಲ್ ಜೀವನ್‌ ಆಗ್ರಹ

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ) ಹೆಸರನ್ನು ತಿದ್ದುಪಡಿ ಮಾಡಿರುವ...