ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ: ನಿಟ್ಟುಸಿರು ಬಿಟ್ಟ ರೈತರು

Date:

ಕಳೆದ ಆಗಸ್ಟ್‌ 10ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಚೈನ್ ಲಿಂಕ್ ಮುರಿದು ಹೋಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಆ ಬಳಿಕ ತಜ್ಞರು ಹರಿಯುವ ನೀರಿನಲ್ಲೇ ಕಾರ್ಯಾಚರಣೆ ನಡೆಸಿ, ಸ್ಟಾಪ್ ಲಾಗ್‌ ಗೇಟ್ ಅಳವಡಿಕೆ ಮಾಡಿದ್ದರು. ಇದಾದ ಬೆನ್ನಲ್ಲೇ ಸದ್ಯ ಡ್ಯಾಂಗೆ ಅಪಾರ ಪ್ರಮಾಣ ನೀರು ಹರಿದು ಬಂದಿದೆ.

ಜಲಾಶಯಕ್ಕೆ ಈಗ 29,014 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ 90 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕಿತ್ತು ಹೋಗಿದ್ದ 19ನೇ ಗೇಟ್ ಬಂದ್ ಮಾಡಿದ ನಂತರ ಇದುವರೆಗೂ 20 ಟಿಎಂಸಿ ನೀರು ಸಂಗ್ರಹವಾಗಿದೆ. ತುಂಗಭದ್ರಾ ಜಲಾಶಯವು ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದೆ.

90 ಟಿಎಂಸಿ ಅಡಿ ನೀರು ಸಂಗ್ರಹವಾಗಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಜೀವ ಕಳೆ ಬಂದಿದ್ದು, ವರುಣನ ಅರ್ಭಟದಿಂದಾಗಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಅಲ್ಲದೇ, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಇದರೊಂದಿಗೆ ರೈತರ ಆತಂಕ ದೂರವಾದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರಿಗೆ ಶಿಕ್ಷೆ; ನುಡಿದಂತೆ ನಡೆಯಲಿ ನರೇಂದ್ರ ಮೋದಿ

ತುಂಗಭದ್ರಾ ಜಲಾಶಯ ಭರ್ತಿಯಾದರೆ ಅಚ್ಚುಕಟ್ಟು ಪ್ರದೇಶದಲ್ಲಿ ಎರಡು ಬೆಳೆ ಬೆಳೆಯುತ್ತಾರೆ. ಈ ಬಾರಿ ದುರಂತ ಸಂಭವಿಸಿ ಆತಂಕ ಎದುರಾಗಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರು ಸಂಗ್ರಹವಾಗುವ ನಿರೀಕ್ಷೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...