ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ಕೊಳಚೆ ನೀರು: ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ದೇರಳಕಟ್ಟೆ ಖಾಸಗಿ ಆಸ್ಪತ್ರೆ ಸಮೀಪದ ರಿಕ್ಷಾ ಪಾರ್ಕ್ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕರ ಘಟಕದ ಆಶ್ರಯದಲ್ಲಿ ಪ್ರತಿಭಟನೆ ಸಭೆ ನಡೆಯಿತು.

ಪ್ರತಿಭಟನೆ ಸಭೆ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ಇರುವ ರಿಕ್ಷಾ ಪಾರ್ಕ್‌ನಲ್ಲಿ ಜರುಗಿತು. ಸಭೆಯಲ್ಲಿ ಮಾತನಾಡಿದ ತುಳು ನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ದೇರಳಕಟ್ಟೆ ಪರಿಸರದಲ್ಲಿ ನಿರ್ಮಾಣವಾಗಿರುವ ಬಹುಮಹಡಿ ಕಟ್ಟಡಗಳಿಗೆ ಕೊಳಚೆ ನೀರು ಸರಬರಾಜು ಹಾಗೂ ಹೊರಹರಿವು ವ್ಯವಸ್ಥೆ ಸಮರ್ಪಕವಾಗಿ ಮಾಡಿಲ್ಲ. ಇದರ ಪರಿಣಾಮವಾಗಿ ಕೊಳಚೆ ನೀರು ಆಸ್ಪತ್ರೆ ಸಮೀಪದ ರಿಕ್ಷಾ ಪಾರ್ಕ್ ಬಳಿ ಶೇಖರಗೊಂಡು ದುರ್ವಾಸನೆ ಉಂಟುಮಾಡುತ್ತಿದೆ ಎಂದು ದೂರಿದರು.

ಈ ದುರ್ವಾಸನೆಯಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಉಂಟಾದರೂ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಾಂತ್ ಭಟ್ ಕಡಬ ಮಾತನಾಡಿ, ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ಶೇಖರಗೊಂಡಿರುವ ಕೊಳಚೆ ನೀರಿನ ನಿರ್ಮೂಲನೆ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಬಹುಮಹಡಿ ಕಟ್ಟಡಗಳ ಮಾಲಕರು ತಮ್ಮ ಕಟ್ಟಡಗಳಿಂದ ಹೊರಹೊಮ್ಮುವ ಕೊಳಚೆ ನೀರು ಸರಿಯಾಗಿ ಹರಿಯುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ರೀತಿಯಲ್ಲಿ ಕೊಳಚೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತುಳು ನಾಡ ರಕ್ಷಣಾ ವೇದಿಕೆ ಮುಖಂಡರಾದ ಕ್ಲೀಟಸ್ ಲೋಬೊ ಅಳಕೆ, ರಕ್ಷಿತ್ ಕುಡುಪು ಹಾಗೂ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...