ತುರುವೇಕೆರೆ | ಮಾದಿಹಳ್ಳಿ ಪಿಎಸಿಎಸ್‌ನಲ್ಲಿ ಕೋಟ್ಯಂತರ ಹಣ ದುರುಪಯೋಗ ಆರೋಪ: ಕಾರ್ಯದರ್ಶಿಯ ಬಂಧನ

Date:

ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂಪಾಯಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.

ಸಂಘದ ಕಾರ್ಯದರ್ಶಿ ಪ್ರಕಾಶ್ ಎಂಬುವವರನ್ನು ತುರುವೇಕೆರೆ ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಹೆಚ್ಚಿನ ತನಿಖೆಗಾಗಿ ಪೋಲಿಸ್ ಕಸ್ಟಡಿಗೆ ಒಪ್ಪಿಸಬೇಕೆಂದು ಕೇಳಿದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪೋಲಿಸರ ವಶಕ್ಕೆ ನೀಡಿ ಆದೇಶಿಸಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾದಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾರ್ವಜನಿಕರು ಇಟ್ಟಿದ್ದ 2 ಕೋಟಿ 22 ಲಕ್ಷ ರೂಪಾಯಿಗಳ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಸಂಘದ ಕಾರ್ಯದರ್ಶಿ ಪ್ರಕಾಶ್ ಅವರನ್ನು ತುರುವೇಕೆರೆ ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಮಾದಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನೂರಾರು ಸದಸ್ಯರು ತಮ್ಮ ಹಣವನ್ನು ಠೇವಣಿ ಇಟ್ಟಿದ್ದರು. ಈ ಹಣವನ್ನು ವಿವಿಧ ಹಂತಗಳಲ್ಲಿ ಆರೋಪಿ ಪ್ರಕಾಶ ದುರುಪಯೋಗ ಪಡಿಸಿಕೊಂಡು ಠೇವಣಿದಾರರಿಗೆ ಸಕಾಲಕ್ಕೆ ಹಣ ಕೊಡದೆ ಸಬೂಬು ಹೇಳಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ. ಈತ ಸುಮಾರು ಎರಡು ಮೂರು ವರ್ಷಗಳಿಂದ ನಾಪತ್ತೆಯಾಗಿದ್ದ.

ಕಳೆದ ಎರಡು ಮೂರು ವರ್ಷಗಳ ಹಿಂದೆಯೇ ವಂಚನೆ ಪ್ರಕರಣ ಬಯಲಿಗೆ ಬಂದಿತ್ತಾದರೂ ಸಹ ಆಡಿಟ್ ವರದಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ದೂರು ಸಲ್ಲಿಸುವುದು ತಡವಾಗಿತ್ತು. ಕಳೆದ 15 ದಿನಗಳ ಹಿಂದೆ ಸಂಘದ ನಿರ್ದೇಶಕರಾದ ಉದಯ್ ಕುಮಾರ್ ಅವರು ದಾಖಲೆ ಸಹಿತ ಪೋಲಿಸರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಪ್ರಕಾಶ್‌ನನ್ನು ಪೋಲಿಸರು ಬಂಧಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿಎಸ್‌ಐ ಸಂಗಮೇಶ ಮೇಟಿ, ಆರೋಪಿಯನ್ನು ಅ. 14 ರ ರಾತ್ರಿ ತುಮಕೂರಿನಲ್ಲಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ವರದಿ: ಎಸ್. ನಾಗಭೂಷಣ್ ತುರುವೇಕೆರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...