ತುರುವೇಕೆರೆ | ಡಿ.31 ರಿಂದ ಅನಿರ್ದಿಷ್ಟಾವಧಿ ಸಾರಿಗೆ ‍ನೌಕರರ ಮುಷ್ಕರಕ್ಕೆ ಕರೆ

Date:

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅಗತ್ಯವಿರುವ ಹತ್ತಾರು ಮೂಲಭೂತ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕೆಎಸ್‌ ಆರ್‌ ಟಿ ಸಿಯ ಎಲ್ಲಾ ಸಿಬ್ಬಂದಿ ಸಹಕರಿಸಬೇಕೆಂದು ಸಿಐಟಿಯುನ ಮುಖಂಡ ಎ.ಆರ್.ದೇವರಾಜು ಕರೆ ನೀಡಿದ್ದಾರೆ. 

 ತುರುವೇಕೆರೆ ಪಟ್ಟಣದ ಕೆಎಸ್‌ ಆರ್‌ ಟಿಸಿ ಬಸ್‌ ನಿಲ್ದಾಣದಲ್ಲಿ ಜಾಗೃತಿ ಜಾಥಾದೊಂದಿಗೆ ಆಗಮಿಸಿದ ಅವರು ರಾಜ್ಯದ ಕೆ ಎಸ್‌ ಆರ್‌ ಟಿ ಸಿ ಸ್ಟಾಫ್‌ ಮತ್ತು ವರ್ಕರ್ಸ್‌ ಫೆಡರೇಷನ್‌, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಸಿಐಟಿಯು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ನೌಕರರ ಸಂಘ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ಸೇರಿದಂತೆ ಹತ್ತು ಹಲವಾರು ಸಂಘಟನೆಗಳ ಆಶ್ರಯದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

 ಸುಮಾರು 38 ತಿಂಗಳ ಸಂಬಳ ಬಾಕಿ ಇತ್ಯರ್ಥ ಪಡಿಸಬೇಕು. ಜನವರಿ 1 ರಿಂದ ಹೊಸ ವೇತನ ನೀತಿ ಪ್ರಕಟಿಸಬೇಕು. ಶಕ್ತಿ ಯೋಜನೆಯಿಂದ ನಿಗಮಕ್ಕೆ ಸಾಕಷ್ಟು ಲಾಭವಾಗಿದ್ದರೂ ಸಹ ನೌಕರರನ್ನು ಕಡೆಗಣಿಸಲಾಗಿದೆ. ಅಲ್ಲದೇ ಸಿಬ್ಬಂದಿಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ನೌಕರರ ಹಲವಾರು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಪ್ರಯೋಜವಾಗಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

  ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿತ್ತು. ನಮ್ಮ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಹರಿಸುವ ಭರವಸೆಯನ್ನು ಸಚಿವ ದಿನೇಶ್‌ ಗುಂಡೂರಾವ್‌ ರವರು ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಮ್ಮ ಹೋರಾಟ ಅನಿವಾರ್ಯವಾಗಿದೆ ಎಂದು ಎ.ಆರ್‌. ದೇವರಾಜ್‌ ಹೇಳಿದರು.

 ಡಿ.31 ರಿಂದ ಆರಂಭವಾಗುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಎಲ್ಲಾ ಸಂಘಟನೆಯವರು ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು.

 ಇದೇ ಸಂಧರ್ಭದಲ್ಲಿ ಎಐಟಿಯುಸಿ ಯ ಮುಖಂಡ ಕೆ.ಎಚ್.ದೇವರಾಜು, ತುರುವೇಕೆರೆಯ ಎಸ್‌ ಎಫ್‌ ಐ ಮುಖಂಡ ಟಿ.ಎಚ್.ಸತೀಶ್‌, ರಾಜಣ್ಣ ಇದ್ದರು.

ವರದಿ- ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...