ತುರುವೇಕೆರೆ | ಅಕಾಲಿಕ ಮಳೆಗೆ ರಾಗಿ ಬೆಳೆ ಹಾನಿ : ರೈತರ ಜಮೀನುಗಳಿಗೆ ತಹಶೀಲ್ದಾರ್ ಭೇಟಿ

Date:

 ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ ದಬ್ಬೇಘಟ್ಟ ಹೋಬಳಿಯಲ್ಲಿ ವೀಕ್ಷಣೆ ನಡೆಸಿದರು.

 ದಬ್ಬೇಘಟ್ಟ ಹೋಬಳಿಯ ಸೂಳೆಕೆರೆ, ಹೆಡಗೀಹಳ್ಳಿ, ಬೇವಿನಹಳ್ಳಿ, ಅರೆಮಲ್ಲೇನಹಳ್ಳಿ, ಕ್ಯಾಮಸಂದ್ರ ಸೇರಿದಂತೆ ಹಲವಾರು ಗ್ರಾಮಗಳ ರೈತರುಗಳು ಬೆಳೆದಿರುವ ರಾಗಿ ಹೊಲಗಳಿಗೆ ಭೇಟಿ ನೀಡಿದರು.

 ಈಗಾಗಲೇ ಕಟಾವು ಮಾಡಿರುವ ರಾಗಿ ತೆನೆ ನೆನೆದಿದೆ. ಮಳೆ ಹೀಗೆ ಮುಂದುವರೆದರೆ ಹುಲ್ಲು ಮತ್ತು ರಾಗಿ ಎರಡೂ ಕಪ್ಪಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುತ್ತದೆ. ಮೋಡ ಕವಿದ ವಾತಾವರಣವಿರುವ ಕಾರಣ ಹಸಿಯಾಗಿರುವ ರಾಗಿಯನ್ನು ಒಣಗಿಸಲು ರೈತರು ಕಷ್ಟಪಡುತ್ತಿದ್ದಾರೆ. ಕೆಲ ಭಾಗಗಳಲ್ಲಿ ಭಾರಕ್ಕೆ ತೆನೆ ನೆಲಕಚ್ಚಿದೆ. ಮಳೆ ನಿಲ್ಲದಿದ್ದರೆ ರಾಗಿ ಮೊಳಕೆಯೊಡೆಯಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ತುರುವೇಕೆರೆ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಬಿ.ಪೂಜಾ ಮಾತನಾಡಿ ಈ ಬಾರಿ ಶೇ.7ರಷ್ಟು ರಾಗಿ ಬೆಳೆ ಬಿತ್ತನೆ ಹೆಚ್ಚಾಗಿದೆ. ಉತ್ತಮ ರಾಗಿ ಫಸಲು ಬಂದಿದೆ. ರೈತರು ಡಿ.11 ರ ತನಕ ಹವಮಾನದಲ್ಲಿ ವೈಪರೀತ್ಯ ಕಂಡು ಬರುವ ಕಾರಣ ಯಾರೂ ರಾಗಿ ಕಟಾವು ಮಾಡಬಾರದು. ಈಗಾಗಲೇ ಕಟಾವು ಮಾಡಿರುವ ರಾಗಿ ತೆನೆಯನ್ನು ಟಾರ್ಪಲ್ ನಿಂದ ಸಂರಕ್ಷಿಸಬೇಕು. ಹವಾಮಾನ ನೋಡಿಕೊಂಡು ರಾಗಿ ಕಟಾವು ಮಾಡಬೇಕು. ಒಂದು ವೇಳೆ ರಾಗಿ ಬೆಳೆಗೆ ಹಾನಿಯಾಗಿದ್ದರೆ ತಾಲ್ಲೂಕು ಕೃಷಿ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ವೇಳೆ ಬೆಳೆಹಾನಿಯಾಗಿರುವುದು ಕಂಡುಬಂದಲ್ಲಿ ಪ್ರತಿ ಹೆಕ್ಟೇರ್‌ಗೆ 8500 ರೂಪಾಯಿಗಳ ಪರಿಹಾರದ ಹಣವನ್ನು ನೀಡಲಾಗುವುದು ಎಂದು ಹೇಳಿದರು.

 ಇದೇ ಸಂಧರ್ಭದಲ್ಲಿ ಕೃಷಿ ಎ.ಒ.ಗಿರೀಶ್, ಸಿಬ್ಬಂದಿ ನವೀನ್ ಕುಮಾರ್ ಸೇರಿದಂತೆ ಕಂದಾಯ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.

 ವರದಿ – ಎಸ್. ನಾಗಭೂಷಣ್ ತುರುವೇಕೆರೆ 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...