ತುರುವೇಕೆರೆ | ಅನುಭದಲ್ಲಿರುವವರಿಗೆ  ಭೂಮಿ ಮಂಜೂರು ಮಾಡಲು ರೈತರ ಮನವಿ 

Date:

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಗೆ ಸೇರಿದ ಗುಡ್ಡೇನಹಳ್ಳಿಯ ಸರ್ವೆ ನಂಬರ್ 7,8,15,16,27 ರಲ್ಲಿ ಹಲವಾರು ವರ್ಷಗಳಿಂದ ಅನುಭವದಲ್ಲಿರುವ ರೈತಾಪಿಗಳಿಗೇ ಜಮೀನನ್ನು ಮಂಜೂರು ಮಾಡಿಕೊಡಬೇಕೆಂದು ಗುಡ್ಡೇನಹಳ್ಳಿಯ ಗ್ರಾಮಸ್ಥರು ತಹಸೀಲ್ದಾರ್ ಎನ್.ಎ.ಕುಂಇ ಅಹಮದ್ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

 ಗುಡ್ಡೇನಹಳ್ಳಿಯಲ್ಲಿ ಸಾಕಷ್ಟು ಮಂದಿ ಬಡವರಿದ್ದಾರೆ. ಅವರಿಗೆ ಈಗಾಗಲೇ ಅನುಭವದಲ್ಲಿರುವ ಜಮೀನುಗಳೇ ಜೀವನಾಧಾರವಾಗಿದೆ. ಈಗ ರೈತರು ಅನುಭವದಲ್ಲಿರುವ ಜಮೀನುಗಳು ಅರಣ್ಯ ಇಲಾಖೆಗೆ ಸೇರಬೇಕೆಂದು ಹೇಳಿ ಕೆಲವರಿಗೆ ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ಸುಮಾರು 30 ವರ್ಷಗಳಿಂದಲೂ ಅನುಭವದಲ್ಲಿರುವ ಹಲವಾರು ರೈತಾಪಿಗಳು ಆ ಜಮೀನಿನಲ್ಲಿ ತೆಂಗು, ಅಡಿಕೆ, ಮನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಜಮೀನುಗಳಿಗೆ ಸಂಬಂಧಿಸಿದಂತೆ 1998  ರಲ್ಲೇ ಸಂಬಂಧಿಸಿದ ಇಲಾಖೆಗಳಿಗೆ ಜಮೀನು ಮಂಜೂರು ಮಾಡುವಂತೆ ಮನವಿಯನ್ನೂ ಸಹ ಸಲ್ಲಿಸಲಾಗಿದೆ. 

 ಇದುವರೆಗೂ ಸುಮ್ಮನಿದ್ದ ಅರಣ್ಯ ಇಲಾಖೆ ಈಗ ಆ ಎಲ್ಲಾ ಜಮೀನುಗಳು ತಮ್ಮ ಇಲಾಖೆಗೆ ಸೇರಿದ್ದು ಎಂದು ಹೇಳುತ್ತಿರುವುದು ಸರಿಯಲ್ಲ. ಅನುಭವದಲ್ಲಿರುವ ಜಮೀನನ್ನು ಹೊರೆತುಪಡಿಸಿ ಇನ್ನೂ ಸಾಕಷ್ಟು ಸರ್ಕಾರಿ ಜಮೀನು ಇದೆ. ಇಲ್ಲಿ ಯಾರೂ ಉಳುಮೆ ಮಾಡಿಲ್ಲ. ಆ ಜಮೀನುಗಳತ್ತ ಅರಣ್ಯ ಇಲಾಖೆಯವರು ಗಮನ ಹರಿಸಿ ಉಳಿಸಿಕೊಳ್ಳಲಿ ಎಂದು ಗ್ರಾಮದ ಮುಖಂಡರಾದ ವಿಎಸ್‌ಎಸ್‌ಎನ್ ನ ಮಾಜಿ ಅಧ್ಯಕ್ಷರಾದ ಬಸವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಮುಕುಂದ್, ಕೆಂಚಪ್ಪ, ಕೃಷ್ಣಪ್ಪ ಸೇರಿದಂತೆ ಹಲವಾರು ಮಂದಿ ತಹಸೀಲ್ದಾರ್ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಹಲವರು ವರ್ಷಗಳಿಂದ ಭೂಮಿಯ ಅನುಭವದಲ್ಲಿರುವ ರೈತರನ್ನು ಒಕ್ಕಲೆಬ್ಬಿಸಿದಲ್ಲಿ ರೈತರ ಜೀವನಕ್ಕೇ ಕೊಡಲಿ ಪೆಟ್ಟು ಹಾಕಿದಂತಾಗುತ್ತದೆ. ಆದ್ದರಿಂದ ಸದ್ಯ ಅನುಭವದಲ್ಲಿರುವ ಭುಮಿಯನ್ನು ಕೂಡಲೇ ಸಂಬಂಧಿಸಿದ ರೈತರಿಗೇ ಹಕ್ಕುಪತ್ರ ನೀಡುವ ಮೂಲಕ ಅವರಿಗಿರುವ ಆತಂಕವನ್ನು ದೂರಮಾಡಬೇಕೆಂದು ರೈತ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

 ಈ ಸಂಧರ್ಭದಲ್ಲಿ ಗ್ರಾಮದ ಹಲವಾರು ಮುಖಂಡರು ತಹಸೀಲ್ದಾರ್ ರವರನ್ನು ಭೇಟಿಯಾಗಿದ್ದರು. 

ವರದಿ- ಎಸ್. ನಾಗಭೂಷಣ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...