ತುರುವೇಕೆರೆ | ಮಗುವಿನೊಂದಿಗೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

Date:

 ಗೃಹಿಣಿಯೋರ್ವರು ತನ್ನ ಮೂರುವರೆ ವರ್ಷದ ಗಂಡು ಮಗುವಿನೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯಕಲಕುವ ಘಟನೆ ವರದಿಯಾಗಿದೆ

ತುರುವೇಕೆರೆ  ತಾಲೂಕಿನ ಮೇಲಿನವರಗೇನಹಳ್ಳಿಯ ನಿವಾಸಿ ಬಸವರಾಜು ಎಂಬುವವರ ಪತ್ನಿ ಡಿ.ಶಶಿಕಲಾ (37) ರವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ತನ್ನೊಂದಿಗೆ ಮೂರುವರೆ ವರ್ಷದ ಗಂಡುಮಗು ಗೋಕುಲ್ ನ ಹೊಟ್ಟೆಗೆ ವೇಲ್ ಕಟ್ಟಿಕೊಂಡು ನೀರಿಗೆ ಒಟ್ಟಿಗೆ ಜಿಗಿದಿದ್ದಾರೆ. ಇಬ್ಬರು ಸಹ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಶಶಿಕಲಾ

ಕಳೆದ ಶನಿವಾರದಂದು ಮನೆಯಿಂದ ಹೊರ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಶಶಿಕಲಾ ಮೂರು ದಿನಗಳಿಂದ ಕಾಣಿಯಾಗಿರುವ ಬಗ್ಗೆ ಮೃತಳ ಅಣ್ಣ ರೇಣುಕಪ್ಪ ತುರುವೇಕೆರೆ  ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ದಾರಿ ಹೋಕರು ಅಪರಿಚಿತ ಶವ ಕೆರೆಯಲ್ಲಿ ತೇಲುತ್ತಿರುವ ಬಗ್ಗೆ ಪಟ್ಟಣದ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಲೋಹಿತ್ ಭೇಟಿ ನೀಡಿ ಪರಿಶೀಲಿಸಿದರು.

 ಆ ವೇಳೆ ಶಶಿಕಲಾ ರವರು ತಾವು ತಂದಿದ್ದ ಕೈ ಚೀಲದಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನನ್ನು ಕ್ಷಮಿಸಿ ಬಿಡಿ. ನನ್ನ ಮತ್ತು ನನ್ನ ಮಗ ಗೋಕುಲ್ ನ ಶವವನ್ನು ನನ್ನ ತಂದೆ ತಾಯಿಯವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ಮಾಡಿ ಎಂದು ಬರೆದಿರುವ ಡೆತ್ ನೋಟ್ ಸಿಕ್ಕಿದೆ ಎಂದು ತಿಳಿದುಬಂದಿದೆ. ಅಗ್ನಿ ಶಾಮಕ ಸಿಬ್ಬಂದಿಗಳ ಸಹಾಯದಿಂದ ಇಬ್ಬರ ಶವವನ್ನು ಕೆರೆಯಿಂದ ಹೊರತೆಗೆಯಲಾಯಿತು. 

 ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದಪ್ಪ ನವರು ಕೆರೆಯೊಳಗೆ ಸುಮಾರು ಐದುನೂರಕ್ಕೂ ಹೆಚ್ಚು ಮೀಟರ್ ದೂರ ಹೊಟ್ಟೆಗೆ ಹಗ್ಗ ಕಟ್ಟಿಕೊಂಡು ತಾಯಿ, ಮಗುವಿನ ಶವವನ್ನು ದಡಕ್ಕೆ ಸಾಗಿಸಿದ ಕ್ರಮ ಸಾರ್ವಜನಿಕರ ಮೆಚ್ಚುಗೆಗಳಿಸಿತು. 

 ತಮ್ಮ ಸಹೋದರಿ ಕಾಣೆಯಾಗಿದ್ದಾಳೆಂದು ದೂರು ಸಲ್ಲಿಸಿದ್ದ ರೇಣುಕಪ್ಪ ತನ್ನ ಸಹೋದರಿಯ ಸಾವಿಗೆ ಪತಿ ಬಸವರಾಜು ಕೊಡುತ್ತಿದ್ದ ಕಿರುಕುಳವೇ ಕಾರಣ ಎಂದು 

ತುರುವೇಕೆರೆ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. 

ಮೃತಳ ಗಂಡ ಬಸವರಾಜು ಕುಡಿದು ಬಂದು ಹೆಂಡತಿಯೊದಿಗೆ ಜಗಳವಾಡುತ್ತಿದ್ದನು. ಈ ಬಗ್ಗೆ ಎರಡೂ ಕುಟುಂಬದವರೂ ಕೂಡಿ ರಾಜಿ, ಸಂಧಾನ ಕೂಡ ಮಾಡಿದ್ದರು. ಆದರೂ ಸಹ ಗಂಡನ ಕಿರುಕುಳ ಮಿತಿಮೀರಿದ್ದರಿಂದ ತನ್ನ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರೇಣುಕಪ್ಪ ದೂರಿದ್ದಾರೆಂದು ತಿಳಿದುಬಂದಿದೆ.

 ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...