ತುರುವೇಕೆರೆ | ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ

Date:

 ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.

 ತುರುವೇಕೆರೆಯಲ್ಲಿ ಪತ್ರಕಕರ್ತರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಮೊದಲು ತಾನು ಅಧಿಕಾರಕ್ಕೆ ಬರಲು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮತದಾರರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿತು. ಈಗ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ರಾಜ್ಯಾದ್ಯಂತ ಸರ್ಕಾರ ತನ್ನ ಕಾರ್ಯಕರ್ತರನ್ನು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಪದಾದಿಕಾರಿಗಳ ನೇಮಕ ಮಾಡಿದೆ.

 ಈ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಮಾಸಿಕ ಗೌರವ ಧನ ನೀಡಲಾಗುತ್ತಿದೆ. ಇದು ಸಾರ್ವಜನಿಕರ ಹಣದ ದುರ್ಬಳಕೆಯಾಗುತ್ತಿದೆ ಎಂದು ಕೃಷ್ಣಪ್ಪ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಸರ್ಕಾರ ಜಾರಿಗೆ ತರುವ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರಿ ಅಧಿಕಾರಿಗಳು ಇದ್ದಾರೆ. ಅದಕ್ಕೆಂದೇ ಸರ್ಕಾರಗಳು ಸಂಬಳ ನೀಡುತ್ತಿದೆ. ಅದರ ಮಧ್ಯೆಯೂ ತಮ್ಮ ಪಕ್ಷದ ಕಾರ್ಯಕರ್ತರ ಜೇಬು ತುಂಬಿಸಲು ಅನುಷ್ಠಾನ ಸಮಿತಿ ಮಾಡಿರುವುದು ಕಾನೂನಾತ್ಮಕವಾಗಿ ತಪ್ಪು. ಸಾರ್ವಜನಿಕರ ಹಣ ಅನ್ಯಥಾ ವ್ಯಯ ಮಾಡುವುದು ಅಕ್ಷಮ್ಯ ಅಪರಾಧ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಇಡಿ ಇಲಾಖೆಯವರು ಸ್ವಯಂ ಪ್ರೇರಣೆಯಿಂದ ದಾಖಲಿಸಿಕೊಂಡು ತನಿಖೆ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದರು.

  ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಗಳ ಹಾವಳಿ ಹೆಚ್ಚಾಗಿದೆ. ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ಅಧಿಕ ಬಡ್ಡಿ ವಸೂಲು ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು. ತಾಲೂಕಿನಲ್ಲಿ ಯಾವುದೇ ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರಿಗೆ ಕಿರುಕುಳ ನೀಡಿದರೆ ಅಂತಹ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಾವು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.  

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡರಾದ ವೆಂಕಟೇಶ್‌ ಕೃಷ್ಣಪ್ಪ, ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್‌, ಪರಮೇಶ್‌, ಮಾದಿಹಳ್ಳಿ ಕಾಂತರಾಜ್‌, ಮುನಿಯೂರು ರಂಗಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕುಮಾರ್‌ ಉಪಸ್ಥಿತರಿದ್ದರು.

ವರದಿ – ಎಸ್. ನಾಗಭೂಷಣ್ ತುರುವೇಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...