ತುರುವೇಕೆರೆ | ಮಳೆಗೆ ಮೂರು ಮನೆಗಳು ಹಾನಿ : ಪರಿಹಾರದ ಭರವಸೆ ನೀಡಿದ ತಹಶೀಲ್ದಾರ್

Date:

ತುರುವೇಕೆರೆ  ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಹಿಂಗಾರು ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಸಂತಸ ಮೂಡಿದೆ.

 ಹಿಂಗಾರು ಬೆಳೆಗಳಾದ ರಾಗಿ, ತೊಗರಿ, ಅವರೆ, ಜೋಳ, ಹರಳು, ಹುರುಳಿ, ಸಾಸಿವೆ, ಎಳ್ಳು ಹಾಗು ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ಬಾಳೆ, ತರಕಾರಿ, ಹಣ್ಣು ಹಂಪಲಿನ ಗಿಡಗಳಿಗೆ ನಿರಂತರ ಸೋನೆ ಮಳೆಯಿಂದ ಬೆಳೆಗಳು ಹಚ್ಚ ಹಸಿರಾಗಿ ಕಂಗೊಳಿಸುತ್ತಿವೆ. ರಾಗಿ, ಅವರೆ, ತೊಗರಿ ಮತ್ತು ಹರಳು ಬೆಳೆಗಳು ತೆನೆಯೊಡೆದು ರೈತರಿಗೆ ಒಳ್ಳೆಯ ಫಸಲು ಸಿಗುವ ನಿರೀಕ್ಷೆ ಹೆಚ್ಚಿದೆ.

 ನಿರಂತರ ಮಳೆಯಿಂದ ಕಸಬಾ ಹೋಬಳಿಯ ಮಾದಾಪಟ್ಟಣ ಗ್ರಾಮದ ಮಲ್ಲಿಕಾರ್ಜುನಯ್ಯ ಅವರ ಮನೆಯ ಹೆಂಚುಗಳು ಮತ್ತು ತೀರುಗಳು ಕುಸಿದು ಬಿದ್ದಿವೆ. ದಂಡಿನಶಿವರ ಹೋಬಳಿಯ ಸಂಪಿಗೆ ಹೊಸಹಳ್ಳಿ ಗ್ರಾಮದ ಖಮರುನ್ನಿಸಾ ಅವರ ಮನೆಯ ಗೋಡೆ ಭಾಗಶಃ ಕುಸಿದು ಬಿದ್ದಿದೆ. ಮಾಯಸಂದ್ರ ಹೋಬಳಿಯ ಸೀಗೇಹಳ್ಳಿ ಗ್ರಾಮದ ಲಕ್ಷ್ಮಮ್ಮ ಅವರ ಮನೆಯ ಹಿಂಭಾಗದ ಗೋಡೆ ಕುಸಿದು ನೆಲಕ್ಕುರುಳಿ ಯಾವುದೇ ಪ್ರಾಣ ಹಾನಿಯಾಗದಿದ್ದರೂ ಮನೆಯ ಪರಿಕರಗಳು ಮಳೆ ನೀರಿಗೆ ನೆನೆದು ಹಾಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಕಂದಾಯ ನಿರೀಕ್ಷಕ ಶಿವಕುಮಾರ್, ರಂಗಸ್ವಾಮಿ, ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿಗಳಾದ ಸತೀಶ್, ಪೂರಪ್ಪ, ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದೆಂದು ತಹಶೀಲ್ದಾರ್ ಎನ್.ಎ.ಕುಂಞಅಹಮದ್ ತಿಳಿಸಿದ್ದಾರೆ.

ವರದಿ – ಎಸ್. ನಾಗಭೂಷಣ್ ತುರುವೇಕೆರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...