ತುರುವೇಕೆರೆ | ಬಸ್‌ ಮತ್ತು ಟಾಟಾ ಏಸ್ ನಡುವೆ ಡಿಕ್ಕಿ : ತಪ್ಪಿದ ಭಾರಿ ಅನಾಹುತ

Date:

ಕೆ ಎಸ್‌ ಆರ್‌ ಟಿ ಸಿ ಬಸ್‌ ಮತ್ತು ಟಾಟಾ ಏಸಿ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಠವಶಾತ್‌ ಭಾರಿ ಅನಾಹುತ ತಪ್ಪಿದೆ.

ಬೆಳಗ್ಗೆ 6 ಗಂಟೆಯ ವೇಳೆಗೆ ತಿಪಟೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆ ಎಸ್‌ ಆರ್‌ ಟಿ ಸಿ ಬಸ್‌ ಮತ್ತು ತಿಪಟೂರು ಕಡೆಯಿಂದ ಪಟ್ಟಣಕ್ಕೆ ಬರುತ್ತಿದ್ದ ಹಾಲಿನ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಹಾಲಿನ ವಾಹನ ತುರ್ತು ಸೇವೆಗಾಗಿ ವೇಗವಾಗಿ ಬರುತ್ತಿತ್ತು. ಅತ್ತ ಕೆ ಎಸ್‌ ಆರ್‌ ಟಿ ಸಿ ಬಸ್‌ ದಬ್ಬೇಘಟ್ಟ ರಸ್ತೆಯ ವೃತ್ತದಲ್ಲಿ ಬೆಂಗಳೂರು ಮಾರ್ಗದತ್ತ ಮುಖ ಮಾಡುತ್ತಿತ್ತು. ಆ ವೇಳೆ ಅಪಘಾತ ಸಂಭವಿಸಿದೆ. 

 ಬಸ್‌ ಮತ್ತು ಟಾಟಾ ಏಸಿ ನಡುವೆ ನಡೆದ ಡಿಕ್ಕಿಯ ರಭಸಕ್ಕೆ ಟಾಟಾ ಏಸಿ ರಸ್ತೆಯ ಪಕ್ಕದಲ್ಲಿಟ್ಟಿದ್ದ ಬೃಹತ್‌ ಗಾತ್ರದ ವಿದ್ಯುತ್‌ ಕಂಬಗಳನ್ನು ಏರಿ ರಾಘವೇಂದ್ರ ಭವನದ ಬಾಗಿಲಿನ ಮುಂದೆ ನಿಂತಿದೆ. ವಾಸ್ತವವಾಗಿ ಪ್ರತಿದಿನ ಹೋಟೆಲ್‌ ಮುಂಭಾಗ ಹತ್ತಾರು ಮಂದಿ ಕಾಫಿ ತಿಂಡಿಗಾಗಿ ನಿಂತಿರುತ್ತಿದ್ದರು. ಅದೃಷ್ಠವಶಾತ್ ಇಂದು ಯಾರೂ ನಿಂತಿರಲಿಲ್ಲ ಎಂದು ತಿಳಿದುಬಂದಿದೆ. ಆದರೆ ಟಾಟಾ ಏಸಿ ಚಾಲಕನ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ತಿಪಟೂರು ಮಾರ್ಗ, ದಬ್ಬೇಘಟ್ಟ ಸರ್ಕಲ್‌ ನಲ್ಲಿ ಹೆಚ್ಚು ಜನ ಸಂದಣಿ ಮತ್ತು ವಾಹನ ಸಂಚಾರ ಇದೆ. ರಾಘವೇಂದ್ರ ಭವನದ ಆವರಣದಲ್ಲಿ ಪಾದಚಾರಿಗಳು ಮತ್ತು ವಾಹನಗಳಿಗೆಂದು ನಿಲ್ಧಾಣ ಮಾಡಲಾಗಿದೆ. ಅದಕ್ಕಾಗಿ ಕಬ್ಬಿಣದ ಬೇಲಿಗಳನ್ನೂ ನಿರ್ಮಿಸಲಾಗಿದೆ. ಅದರೆ ಹಲವಾರು ಮಂದಿ ದ್ವಿಚಕ್ರವಾಹನಗಳು, ಕಾರು, ಇನ್ನಿತರೆ ದೊಡ್ಡ ಗಾತ್ರದ ವಾಹನಗಳನ್ನು ಅಲ್ಲದೇ ಹಲವಾರು ಮಾರಾಟಗಾರರು ತಮ್ಮ ವಾಹನಗಳನ್ನು ರಸ್ತೆಯ ಪಕ್ಕದಲ್ಲೇ ನಿಲ್ಲಿಸುತ್ತಿದ್ದಾರೆ. ಇದರಿಂದಾಗಿ ದಬ್ಬೇಘಟ್ಟ ವೃತ್ತದಿಂದ ಬೆಂಗಳೂರು ರಸ್ತೆಗೆ ತೆರಳುವ ವಾಹನಗಳನ್ನು ತಿರುಗಿಸಲು ತೊಂದರೆಯಾಗುತ್ತಿದೆ. ಇದರಿಂದಾಗಿ ದಿನೇ ದಿನೇ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇದನ್ನು ತಪ್ಪಿಸುವ ಸಲುವಾಗಿ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಕಟ್ಟಾಜ್ಞೆ ಹೊರಡಿಸಬೇಕಿದೆ. ಆಗಷ್ಠೇ ಅಪಘಾತಗಳು ನಿಯಂತ್ರಣಕ್ಕೆ ಬರುತ್ತವೆ ಎಂಬುದು ಸಾರ್ವಜನಿಕರ ಅನಿಸಿಕೆಯಾಗಿದೆ. ಈ ಅಪಘಾತ ಪ್ರಕರಣದಲ್ಲಿ ಎರಡೂ ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...