ತುರುವೇಕೆರೆ | ದೊಂಬರನಹಳ್ಳಿಯಲ್ಲಿ ಗಾವು ಸಿಗಿತ ತಡೆಯಲು ಪೋಲಿಸ್ ಸರ್ಪಗಾವಲು : ತಹಶೀಲ್ದಾರ್ ಎನ್.ಎ.ಕುಂಇ ಅಹಮದ್

Date:

 ತುರುವೇಕೆರೆ  ತಾಲೂಕಿನ ದೊಂಬರನಹಳ್ಳಿಯ ಗ್ರಾಮದೇವತೆ ಮುತ್ತಿನಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಹಾಗೂ ಗಾವು ಸಿಗಿತ  ಮಾಡದಂತೆ ಸಾರ್ವಜನಿಕರು ಮಾಡಿಕೊಂಡ ಮನವಿಯ ಮೇರೆಗೆ ಗ್ರಾಮದಲ್ಲಿ ಪೋಲಿಸರ ಸರ್ಪಗಾವಲು ಹಾಕಲಾಗಿದೆ ಎಂದು ತಹಸೀಲ್ದಾರ್ ಎನ್.ಎ.ಕುಂಇ ಅಹಮದ್ ತಿಳಿಸಿದ್ದಾರೆ.

 ಧಾರ್ಮಿಕ ಸ್ಥಳಗಳಲ್ಲಿ ಪ್ರಾಣಿಬಲಿ ನಿಷೇದ ಕಾಯ್ದೆ ಅಡಿ ಜಾತ್ರೆಯ ಆಯೋಜಕರಿಗೆ ಮತ್ತು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿರುವ ತಹಸೀಲ್ದಾರ್ ರವರು ಗ್ರಾಮದಲ್ಲಿ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಕೋಣನ ಬಲಿ ಮತ್ತು ಕುರಿ ಅಥವಾ ಮೇಕೆಯ ಕತ್ತನ್ನು ಬಾಯಿಯಿಂದ ಸಿಗಿಯುವ (ಗಾವು) ಕ್ರಮವು ಕಾನೂನು ಬಾಹಿರವಾಗಿರುವುದರಿಂದ ಈ ಮೌಢ್ಯಾಚರಣೆ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಜಾತ್ರಾ ಮಹೋತ್ಸವವು ಏ 22 ರಿಂದ 24 ರ ವರೆಗೆ ನಡೆಯಲಿದೆ.

 ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಹೋಬಳಿಯ ನಾಗೊಂಡನಹಳ್ಳಿ ಗ್ರಾಮದ ಎಚ್.ಸಿ.ಮುರುಳಿ ಎಂಬುವವರು ತುಮಕೂರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೊಂಬರನಹಳ್ಳಿಯಲ್ಲಿ ನಡೆಯುವ ಮೌಢ್ಯಾಚರಣೆ ಬಗ್ಗೆ ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಮತ್ತು ಪೋಲಿಸ್ ವರಿಷ್ಠಾಧಿಕಾರಿಗಳು ಸ್ಥಳೀಯ ಪೋಲಿಸರು ಮತ್ತು ತಹಸೀಲ್ದಾರ್ ರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಎನ್. ಎ.ಕುಂಇ ಅಹಮದ್ ತಿಳಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಜಾತ್ರಾ ಮಹೋತ್ಸವದಲ್ಲಿ ಮಕ್ಕಳು ಸಹ ಭಾಗವಹಿಸುವರಿದ್ದಾರೆ. ಅವರಿಗೆ ಪ್ರಾಣಿ ಹಿಂಸೆ ಸಹಿಸುವುದು ಅಸಾಧ್ಯ. ಅಲ್ಲದೇ ದೇವರ ಮುಂದೆ ಪ್ರಾಣಿಬಲಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುವುದರಿಂದ ಯಾವುದೇ ಕಾರಣಕ್ಕೂ ಪ್ರಾಣಿವಧೆ ಮಾಡಬಾರದೆಂದು ಆದೇಶಿಸಿದ್ದಾರೆ. ಕೆಲವು ವರ್ಷಗಳ ಕೆಳಗೆ ಸಾಕಷ್ಟು ಪೋಲಿಸ್ ಬಂದೋಬಸ್ತ್ ಏರ್ಪಡಿಸಿದ್ದರೂ ಸಹ ಜನಪ್ರತಿನಿಧಿಗಳಿಂದ ಒತ್ತಡ ತಂದು ಪೋಲಿಸರ ಸಮ್ಮುಖವೇ ಪ್ರಾಣಿಬಲಿ ಮಾಡಲಾಗಿದೆ ಎಂದೂ ಸಹ ದೂರುದಾರರು ದೂರಿದ್ದಾರೆ. ಹಾಗಾಗಿ ಈ ಬಾರಿ ಸಿಪಿಐ ಲೋಹಿತ್, ಎಸೈ ಗಳಾದ ಸಂಗಮೇಶ್ ಮೇಟಿ, ಮೂರ್ತಿ ಯವರ ನೇತೃತ್ವದಲ್ಲಿ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಿ ಪ್ರಾಣಿಬಲಿ ಆಗದಂತೆ ತಡೆಯಲಾಗುವುದು ಎಂದು ತಹಸೀಲ್ದಾರ್ ಎನ್.ಎ. ಕುಂಇ ಅಹಮದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...