ಉದಯನಿಧಿ ಸ್ಟಾಲಿನ್‌ ಹೇಳಿಕೆ ಸುತ್ತ ಪ್ರಿಯಾಂಕ್‌ ಖರ್ಗೆ, ಬಿ ಎಲ್‌ ಸಂತೋಷ್‌ ನಡುವೆ ಟ್ವೀಟ್‌ ಸಮರ

Date:

  • ಹೊಟ್ಟೆಯಲ್ಲಿ ಸೋಂಕು ಇದ್ದರೆ ತಲೆಯನ್ನು ಕತ್ತರಿಸುತ್ತೀರಾ? ಬಿ ಎಲ್‌ ಸಂತೋಷ್‌
  • ಬಿ ಎಲ್‌ ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ: ಖರ್ಗೆ

ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಈ ವಿಚಾರವಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ನಡುವೆ ಟ್ವೀಟ್‌ ಸಮರಕ್ಕೂ ಈ ವಿವಾದ ಸಾಕ್ಷಿಯಾಗಿದೆ.

ಉದಯನಿಧಿ ಸ್ಟಾಲಿನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಪ್ರಿಯಾಂಕ್‌ ಖರ್ಗೆ ಅವರಿಗೆ ಬಿ ಎಲ್‌ ಸಂತೋಷ್‌ ಟ್ವೀಟ್‌ ಮಾಡಿ, “ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ ತಲೆಯನ್ನು ಕತ್ತರಿಸುತ್ತೀರಾ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಬಸವಣ್ಣನವರ ವಚನಗಳ ಮೂಲಕ ಪ್ರಿಯಾಂಕ್‌ ಖರ್ಗೆ ಉತ್ತರಿಸಿದ್ದಾರೆ.

“ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವನ ಘನತೆಯನ್ನು ಖಚಿತಪಡಿಸಿಕೊಳ್ಳದ ಯಾವುದೇ ಧರ್ಮ ನನ್ನ ಪ್ರಕಾರ ಧರ್ಮವಲ್ಲ. ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮವು ರೋಗದಷ್ಟೇ ಕೆಟ್ಟದ್ದು” ಎಂದು ಪ್ರಿಯಾಂಕ್ ಖರ್ಗೆ ಮೊದಲು ಪ್ರತಿಕ್ರಿಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಬಿ ಎಲ್ ಸಂತೋಷ್ ತಿರುಗೇಟು ನೀಡಿ, ‘ಹಾಗಾದರೆ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ, ನೀವು ತಲೆಯನ್ನು ಕತ್ತರಿಸುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.

ಮರಳಿ ಪ್ರಿಯಾಂಕ್‌ ಖರ್ಗೆ ಅವರು ಟ್ವೀಟ್‌ ಮಾಡಿ, “ಬಿ ಎಲ್‌ ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕು” ಎಂದಿದ್ದಾರೆ.

ಮುಂದುವರಿದು, “ದಯೆಯಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂದು ಟ್ವೀಟ್‌ ಮಾಡಿದ್ದಾರೆ.

“ಬಿ ಎಲ್‌ ಸಂತೋಷ್‌ ಅವರೇ ಟ್ರೀಟ್‌ ಮೆಂಟ್‌ ಮಾಡಬೇಕಾದ ಒಂದು ಸೋಂಕು ಇರುವುದನ್ನು ಒಪ್ಪಿಕೊಂಡಿರುವುದು ಸಂತೋಷದ ಸಂಗತಿ ಎಂದಿದ್ದಾರೆ. ಕಳೆದ ಸಾವಿರಾರು ವರ್ಷಗಳಿಂದ ಹಲವಾರು ಸೋಂಕುಗಳು ಇದ್ದವು. ಈಗಲೂ ನಮ್ಮ ನಡುವೆ ಅವುಗಳು ಇವೆ. ಮನುಷ್ಯರ ನಡುವೆ ತಾರತಮ್ಯ ಮಾಡುವ ಸೋಂಕು, ಮನುಷ್ಯರಾಗಿ ಗೌರವವನು ನೀಡದ ಸೋಂಕು” ಎಂದು ಪ್ರಿಯಾಂಕ್‌ ಹೇಳಿದ್ದಾರೆ.

“ನಾನು ನಿಮ್ಮಷ್ಟು ಬುದ್ಧಿವಂತನಲ್ಲ. ಹೀಗಾಗಿ ಕೆಲವು ವಿಚಾರಗಳಿಗೆ ಸಂಬಂಧಿಸಿ ನನಗೆ ಜ್ಞಾನ ಕೊಡಿ” ಎಂದು ಪ್ರಿಯಾಂಕ್‌ ಖರ್ಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

  • ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?
  • ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?
  • ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?
  • ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?
  • ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?
  • ಮಹಿಳೆಯರನ್ನು ಕೀಳಾಗಿ ಕಾಣುವ ಪದ್ಧತಿಗಳನ್ನು ಆರಂಭ ಮಾಡಿದ್ದು ಯಾರು?
  • ಅಸಮಾನತೆ ಮತ್ತು ದಮನಕಾರಿ ನೀತಿಗೆ ಕಾರಣವಾದ ಸಾಮಾಜಿಕ ಸ್ವರೂಪ ಆಧರಿತ ಜಾತಿ ಪದ್ಧತಿಯನ್ನು ಜಾರಿಗೆ ತಂದವರು ಯಾರು?

“ಇಲ್ಲಿ ಯಾರೂ ತಲೆ ಕಡಿಯಿರಿ ಎಂದು ಹೇಳುತ್ತಿಲ್ಲ. ಈ ಸೋಂಕುಗಳನ್ನು ಸಮಾನ ಹಕ್ಕು ಮತ್ತು ಗೌರವಗಳ ಮೂಲಕ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಹೇಳುತ್ತಿದ್ದಾರೆ ಅಷ್ಟೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿರುವುದು ಸಂವಿಧಾನ ಮತ್ತು ನೀವು ಹಾಗೂ ನಿಮ್ಮ ಸಂಘಟನೆ ಅದಕ್ಕೆ ವಿರುದ್ಧವಾಗಿದ್ದೀರಿ” ಎಂದು ಕುಟುಕಿದ್ದಾರೆ.

“ಸಂತೋಷ್‌ ಜಿ ಅವರೇ ನೀವು ಕರ್ನಾಟಕದವರಿದ್ದೀರಿ. ದಯವಿಟ್ಟು ಗುರು ಬಸವಣ್ಣರ ಸಂದೇಶವನ್ನು ಪ್ರಚಾರ ಮಾಡಿ. ಇದರಿಂದ ನಮಗೆ ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ” ಎಂದಿದ್ದಾರೆ.

“ಇವನಾರವ, ಇವನಾರವ, ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನೆಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂದು ಪ್ರಿಯಾಂಕ್ ಟ್ವೀಟ್ ಮುಗಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...