ತುಮಕೂರು | ವಿದ್ಯುತ್‌ ತಂತಿ ತಗುಲಿ ಇಬ್ಬರು ಬಾಲಕರ ದುರ್ಮರಣ

Date:

  • ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದಾಗ ಘಟನೆ
  • ಇಬ್ಬರೂ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು

ಆಟವಾಡುತ್ತಿದ್ದ ವೇಳೆ ಮನೆಯ ಮಹಡಿ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ತಗುಲಿ ಇಬ್ಬರು ಬಾಲಕರು ಮೃತಪಟ್ಟರುವ ದಾರುಣ ಘಟನೆ ತುಮಕೂರು ತಾಲೂಕಿನ ಬೆಳಗುಂಬಾ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿದ್ಧರಾಮಶ್ವರ ಬಡಾವಣೆಯಲ್ಲಿ ಈ ದುರಂತ ಸಂಭವಿಸಿದೆ. ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಯತೀಶ್ ವಿ (11) ಮತ್ತು ಸಿದ್ಧಲಿಂಗಯ್ಯ ಎಂಬವರ ಪುತ್ರ ಪ್ರಜ್ವಲ್ (14) ಮೃತ ಬಾಲಕರು. ಅಕ್ಕಪಕ್ಕದ ಮನೆಯ ಮಕ್ಕಳಾದ ಇವರಿಬ್ಬರು 8ನೇ ತರಗತಿ ವಿದ್ಯಾರ್ಥಿಗಳಾಗಿದ್ದರು.

ಮನೆಯ ಮಹಡಿಗೆ ಹೊಂದಿಕೊಂಡೇ ವಿದ್ಯುತ್ ತಂತಿ ಹಾದು ಹೋಗಿದ್ದು, ಗುರುವಾರ ಬೆಳಗ್ಗೆ ಮಹಡಿಯ ಮೇಲೆ ಆಟವಾಡುತ್ತಿದ್ದ ಯತೀಶ್ ಮತ್ತು ಪುಜ್ವಲ್ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ಮುಟ್ಟಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಚಾಮರಾಜನಗರ | ನಾಲ್ವರ ಮೇಲೆ ಕಾಡಾನೆ ದಾಳಿ; ಇಬ್ಬರು ಬಾಲಕರ ಸ್ಥಿತಿ ಗಂಭೀರ

ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ತುಮಕೂರು ಗ್ರಾಮಾಂತರ ವೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...