ಬೀದರ್‌ ಜಿಲ್ಲೆಯ ಇಬ್ಬರಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

Date:

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ, 44 ನಿಗಮ, ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ.

ಕಾರ್ಯಕರ್ತರನ್ನು ಒಳಗೊಂಡ ಹೊಸ ಪಟ್ಟಿ ಸಿದ್ದಗೊಳಿಸಿದ ಪಟ್ಟಿಯಲ್ಲಿ ಬೀದರ್‌ ಜಿಲ್ಲೆಯ ಇಬ್ಬರಿಗೆ ನಿಗಮ, ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಸಿಕ್ಕಿದೆ

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರನ್ನು ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಸವಕಲ್ಯಾಣದ ಮಾಜಿ ಶಾಸಕ ಬಿ. ನಾರಾಯಣರಾವ್‌ ಅವರ ಪತ್ನಿ ಮಾಲಾ ಬಿ.ನಾರಾಯಣರಾವ್ ಅವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

ಬಸವರಾಜ ಜಾಬಶೆಟ್ಟಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಟೋಕರೆ ಕೋಳಿ (ಕಬ್ಬಲಿಗ) ಸಮುದಾಯಕ್ಕೆ ಸೇರಿದವರಾದ ಮಾಲಾ ಬಿ.ನಾರಾಯಣ ಅವರು 2021ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸ್ಫರ್ಧಿಸಿ ಸೋಲು ಕಂಡಿದ್ದರು. ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್ಲದೇ ದಿವಂಗತ ಮಾಜಿ ಶಾಸಕ ಬಿ.ನಾರಾಣರಾವ್‌ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...