ತುಮಕೂರು | ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ದುರ್ಮರಣ

Date:

  • ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸ ಹೊರಟಿದ್ದ ಕುಟುಂಬ
  • ನಾಲ್ವರಿಗೆ ಗಂಭೀರ ಗಾಯ; ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ ಚಾಲಕ ವೀರೇಶ್ (30) ಮತ್ತು ಶಶಿಕಲಾ(69) ಮೃತರು ಎಂದು ಗುರುತಿಸಲಾಗಿದೆ.

ಶಶಿಕಲಾ ಮತ್ತು ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆ ಬುಧವಾರ ರಾತ್ರಿ 10 ಗಂಟೆಗೆ ಹೊರಟ್ಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೊಗಬೇಕಾದರೆ ಗುರುವಾರ ಮುಂಜಾನೆ ಡಿ ಹೊಸಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಶಶಿಕಲಾ ಕೊನೆಯುಸಿರೆಳೆದಿದ್ದಾರೆ. ಇನ್ನು ಘಟನೆಯಲ್ಲಿ ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷಾ ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...