ಕಲಬುರಗಿ | ಆತ್ಮಹತ್ಯೆಗಾಗಿ ಭೀಮಾ ನದಿಗೆ ಹಾರಿದ ಮಹಿಳೆ ಬಚಾವ್: ರಕ್ಷಣೆಗೆ ಹೋದ ಇಬ್ಬರು ನೀರುಪಾಲು!

Date:

ಕೌಟುಂಬಿಕ ಸಮಸ್ಯೆಯಿಂದಾಗಿ ತುಂಬಿ ಹರಿಯುತ್ತಿದ್ದ ದೇವಣಗಾಂವ ಸೇತುವೆ ಮೇಲಿನಿಂದ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಆಕೆ ಪತಿ ಸೇರಿ ಸಂಬಂಧಿಕರೊಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಅಫಜಲಪುರ ಮತ್ತು ಆಲಮೇಲ ತಾಲೂಕಿನ ನಡುವೆ ಇರುವ ಭೀಮಾ ನದಿಯ ದೇವಣಗಾಂವ ಸೇತುವೆ ಮೇಲಿಂದ ಮಂಗಳವಾರ ಸಂಜೆ ಲಕ್ಷ್ಮಿ (28) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆಯ ರಕ್ಷಣೆಗಾಗಿ ನದಿಗೆ ಧುಮುಕಿದ್ದ ಪತಿ ಶಿವಕುಮಾರ (36) ಹಾಗೂ ಸಹೋದರ ಸಂಬಂಧಿ ರಾಜು ಅಂಕಲಗಿ (39) ನೀರಿನ ರಭಸಕ್ಕೆ ಸಿಕ್ಕಿ ದಡಕ್ಕೆ ಬರಲು ಸಾಧ್ಯವಾಗದೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಇಬ್ಬರೂ ನಾಪತ್ತೆಯಾಗಿದ್ದರು.

ಮಹಿಳೆಯನ್ನು ಸ್ಥಳೀಯ ಮೀನುಗಾರರು ರಕ್ಷಿಸಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೊನ್ನ ಬ್ಯಾರೇಜ್‌ ಹೊರ ಹರಿವು ಗೇಟ್‌ ಬಂದ್‌ ಮಾಡಿಸಿ ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಕತ್ತಲಾಗಿರುವುದರಿಂದ ಮಂಗಳವಾರ ರಾತ್ರಿ ಕಾರ್ಯಾಚರಣೆ ಕೈಬಿಟ್ಟು ಬುಧವಾರ ಬೆಳಗಿನ ಜಾವ ಪುನಃ ಕಾರ್ಯಾಚರಣೆ ಆರಂಭಿಸಿದಾಗ ಬೆಳಿಗ್ಗೆ 6.30 ಗಂಟೆ ಸುಮಾರಿಗೆ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ.

ಮೃತ ದೇಹ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತಪಟ್ಟ ರಾಜಶೇಖರ ಮತ್ತು ಶಿವಕುಮಾರ ಇಬ್ಬರು ನೀರಿನಲ್ಲಿ ಮುಳುಗುವ ದೃಶ್ಯಗಳು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ರಾಜು ಅಂಕಲಗಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ, ಶಿವಕುಮಾರ ಗುಡ್ಡಡಗಿ ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ನಿವಾಸಿಯಾಗಿದ್ದಾರೆ. ಮೃತ ಶಿವಕುಮಾರ ಅವರಿಗೆ ಇಬ್ಬರು ಜನ ಗಂಡು ಮಕ್ಕಳು, ರಾಜುಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಗಂಡು ಮಗು ಇರುವುದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್

ಈ ಕುರಿತು ಅಫಜಲಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ತನಿಖೆ ಮಂದುವರಿದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಅಡ್ಡೂರು ಶ್ರೀನಿವಾಸುಲು ಭೇಟಿ ನೀಡಿ ಕುಟುಂಬಸ್ಥರು ಹಾಗೂ ಪೊಲೀಸರಿಂದ ಪ್ರಾಥಮಿಕ ಮಾಹಿತಿ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...