ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರು ಅಮಾನತು

Date:

ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ‌ ನಿರ್ದೇಶಕ ಎಚ್.‌ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಉಕ್ಕಾಲಿ ಹಾಗೂ ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತುಗೊಂಡವರು.

ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...