ಕೊಪ್ಪಳ | ಸಾರ್ವಜನಿಕ ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

Date:

ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.

ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ ಗೋಡೆ ಸಾಕಷ್ಟು ನೆಂದಿತ್ತು. ಶುಕ್ರವಾರ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಮೇಲೆ ಏಕಾಏಕಿ ಶೌಚಾಲಯದ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಬಾನು ಬೇಗಂ (40) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಉಮಾಬಾಯಿ ಹಾಗೂ ಮಹಾದೇವಿ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಮಾಬಾಯಿ ಬಪ್ಪರಗಿ (35) ಎಂಬುವರು ಸಹ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಚಿಂತಾಜನಕ ಸ್ಥಿತಿಯಲ್ಲಿರುವ ಮಹಾದೇವಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಹಿಳಾ ಶೌಚಾಲಯ ಕಳೆದ ಹಲವು ತಿಂಗಳಿಂದ ಶಿಥಿಲಗೊಂಡಿತ್ತು. ಈ ಶೌಚಾಲಯ ಬಳಸದಂತೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ನಿರ್ಬಂಧಿಸಿದ್ದರು. ಸಾರ್ವಜನಿಕ ಶೌಚಾಲಯ ಕುಸಿದು ಬಿಳಲು ಕಳಪೆ ಕಟ್ಟಡ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತ ಮಹಿಳೆಯರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕುಷ್ಟಗಿ ತಹಸೀಲ್ದಾರ್‌ ರವಿ ಅಂಗಡಿ ಹಾಗೂ ಪೊಲೀಸರು ಭೇಟಿ ನೀಡಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...