ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

Date:

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ ದೇಶದ ಮೇಲೆ ಯುದ್ದ ಸಾರಿದ್ದು ಇದರಿಂದ ಜಗತ್ತಿನ ಜನ ಜೀವನ ಅಸ್ತವ್ಯವಸ್ಥಗೊಂಡಿದ್ದು ತಕ್ಷಣ ಯುದ್ದವನ್ನು ನಿಲ್ಲಿಸಬೇಕೆಂದು ಕೆಪಿಆರ್‌ಎಸ್ ರಾಜ್ಯಾಧ್ಯಕ್ಷ ಯು ಬಸವರಾಜ್ ಒತ್ತಾಯಿಸಿದರು.

ನಗರದಲ್ಲಿ ನಡೆಯುತ್ತಿರುವ ಕೆಪಿಆರ್‌ಎಸ್ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿರುವ ಮುಖಂಡರುಗಳು ಪದಾಧಿಕಾರಿಗಳು ಮಂಗಳವಾರ ಗಾಂಧಿವನದಲ್ಲಿ ಹಮ್ಮಿಕೊಂಡಿದ್ದ ಯುದ್ದ ವಿರೋಧಿ ಮತ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದ ಅವರು ಇಡೀ ಜಗತ್ತಿನ ದೇಶದ ತನ್ನ ಅಣತಿಯಂತೆ ನಡೆಯಬೇಕು ಇಲ್ಲದಿದ್ದರೆ ನಾನಾ ರೀತಿ ಕಿರುಕುಳಗಳನ್ನು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಗತ್ತಿನಲ್ಲಿರುವ ನೈಸರ್ಗಿಕ ಸಂಪತ್ಬರಿತ ದೇಶಗಳು ತನ್ನ ಅಣತಿಯಂತೆ ನಡೆಯದಿದ್ದರೆ ಅಮೇರಿಕಾ ದೇಶದ ಸಕಾರಣ ಇಲ್ಲದಿದ್ದರೂ ಕಾಲು ಕೆರೆದು ಯುದ್ದ ನಡೆಸುತ್ತಿದೆ. ಕೆಲವು ತಿಂಗಳ ಹಿಂದೆ ವೆನುಜುವೆಲ ದೇಶದ ಅಧ್ಯಕ್ಷರನ್ನು ಬಂಧಿಸಿತು. ಇದೀಗ ತೈಲ ಸಂಪತ್ಬರಿತ ಇರಾನ್ ದೇಶದ ಮೇಲೆ ಯುದ್ದ ಸಾರಿದೆ. ಇದರಿಂದ 3ನೇ ಪ್ರಪಂಚ ಯುದ್ದದ ಭೀತಿಯು ಆವರಿಸಿದ್ದು, ತಕ್ಷಣ ಯುದ್ದವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾತಂತ್ರ್ಯ, ಸರ್ವಭೌಮ ದೇಶಗಳ ಮೇಲೆ ಅಮೇರಿಕ ದೇಶವು ನಡೆಸುತ್ತಿರುವ ದೌರ್ಜನ್ಯ ದಬ್ಬಾಳಿಕೆಗಳನ್ನು ಭಾರತ ಖಂಡಿಸದೇ ಮೌನವಾಗಿರುವುದು ಸರಿಯಲ್ಲ. ಪ್ರಧಾನಿ ಮೋದಿರವರು ಈ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..? ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ

ಮತ ಪ್ರದರ್ಶನದಲ್ಲಿ ಸಂಘಟನೆಯ ಅಖಿಲ ಭಾರತ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ ಡಾ.ವಿಜಿಕೃಷ್ಣ, ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ , ರಾಜ್ಯ ಉಪಾಧ್ಯಕ್ಷರಾದ ಪಿ.ಆರ್.ಸೂರ್ಯನಾರಾಯಣ, ಶಾಂತರಾಮ್ ನಾಯಕ್, ಸೊಪ್ಪಿನ್, ಚೆನ್ನಪ್ಪ ಆನೆಗುಂದಿ, ಹಣಕಾಸು ಕಾರ್ಯದರ್ಶಿ ಎಚ್ ಆರ್ ನವೀನ್ ಕುಮಾರ್, ಜಂಟಿ ಕಾರ್ಯದರ್ಶಿಗಳಾದ ಪ್ರಭಾ ಬೆಳವಂಗಳ, ಎನ್.ಎಲ್ ಭರತ್ ರಾಜ್, ಜಗದೀಶ್ ಸೂರ್ಯ, ರಾಜ್ಯ ಮುಖಂಡರಾದ ಗಂಗಮ್ಮ, ರಾಜಮ್ಮ, ಚನ್ನರಾಯಪ್ಪ, ಗಾಳಿ ಬಸವರಾಜ್ ಶಿವಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಪಾತಕೋಟೆ ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಎನ್ ಎನ್. ಶ್ರೀರಾಮ್ , ವಿ ನಾರಾಯಣ ರೆಡ್ಡಿ, ಜೆಎಂಎಸ್ ವಿ. ಗೀತಾ ಸೇರಿದಂತೆ ಸಮ್ಮೇಳನದ ಪ್ರತಿನಿಧಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...