ಮೈಸೂರು | ವಿಕಲಚೇತನರ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್ : ಡಾ ರವಿಕುಮಾರ್

Date:

ಮೈಸೂರು ಜಿಲ್ಲೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹೆಚ್‍ಡಿ ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯಾಧಿಕಾರಿಗಳ ಕಚೇರಿ ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ಇವರ ಸಹೋಗದೊಂದಿಗೆ, ‘ವಿಕಲಚೇತನರ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್’ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ತಿಳಿಸಿದರು.

ಹೆಗ್ಗಡದೇವನಕೊಟೆ ತಾಲ್ಲೂಕಿನಲ್ಲಿ 300 ರಿಂದ 350 ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ಮಾಡಿಸಬೇಕಾಗಿದೆ. ಆದ್ದರಿಂದ, ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸರ್ಕಾರದಿಂದ ಬರುವ ಸವಲತ್ತುಗಳನ್ನು ವಿಶೇಷ ಚೇತನರಿಗೆ ನೀಡಬೇಕಾದರೆ ಯುಡಿಐಡಿ ಕಾರ್ಡ್ ಕಡ್ಡಾಯವಾಗಿರುತ್ತದೆ. ಆದುದರಿಂದ, ಫಲಾನುಭವಿಗಳು ಈ ಶಿಬಿರವನ್ನು ಸದುಪಯೋಗಪಡಿಸಿ ಪಡೆಸಿಕೊಂಡು ಯುಡಿಐಡಿ ಕಾರ್ಡನ್ನು ಪಡೆದುಕೊಳ್ಳಿ ” ಎಂದು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಮಾತನಾಡಿ ಕೆಲವು ದಿನಗಳಿಂದ ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಪ್ರತಿ 15 ದಿನಕ್ಕೊಮ್ಮೆ ವಿಶೇಷ ಚೇತನರಿಗೆ ಶಿಬಿರವನ್ನು ಆಯೋಜಿಸಿ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುವ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ದಂಡಾಧಿಕಾರಿ ಶ್ರೀನಿವಾಸ್ ಮಾತನಾಡಿ ‘ಆರೋಗ್ಯ ಇಲಾಖೆ ಹಾಗೂ ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ವತಿಯಿಂದ ಈ ಶಿಬಿರವನ್ನು ನಡೆಸುತ್ತಿರುವುದು ತುಂಬಾ ಸಂತೋಷಕರವಾದ ವಿಷಯ. ಸರ್ಕಾರಿ ಸೌಲಭ್ಯವನ್ನು ತೆಗೆದುಕೊಳ್ಳಬೇಕಾದರೆ ಯುಡಿಐಡಿ ಕಾರ್ಡ್ ಬೇಕಾಗುತ್ತದೆ. ಆದುದರಿಂದ, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಫಲಾನುಭವಿಗಳು ಬಂದು ಯುಡಿಐಡಿ ಕಾರ್ಡನ್ನು ಪಡೆದುಕೊಳ್ಳಿ ಎಂದು ಕರೆ ನೀಡಿದರು.’

ಈ ಕಾರ್ಯಕ್ರಮದಲ್ಲಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಭಾರತ ಸರ್ಕಾರದ ನಶೆಮುಕ್ತ ಭಾರತ ಅಭಿಯಾನ ಯೋಜನೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಿಬಿರಲ್ಲಿ ಒಟ್ಟು150 ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ಮಾಡಿಸಲು ತಜ್ಞ ವೈದ್ಯರಿಂದ ತಪಾಸಣೆಯನ್ನು ಮಾಡಿಸಲಾಯಿತು. ತಾಲ್ಲೂಕು ವಿಕಲಚೇತನರ ಕಾರ್ಯಕರ್ತ ಮಹದೇವಯ್ಯ ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ – ಆರೋಗ್ಯ ಕರ್ನಾಟಕ ‘ ಅಂತಾರಾಷ್ಟ್ರೀಯ ಕಾರ್ಯಾಗಾರ

ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆಯ ಕಣ್ಣಿನ ತಜ್ಞ ಡಾ. ರಾಜಶೇಖರ್, ಕಿವಿ ಮತ್ತು ಮೂಗಿನ ತಜ್ಞ ಡಾ. ಶಿವಕುಮಾರ್, ಮೂಳೆ ತಜ್ಞ ಡಾ. ಶ್ರೀನಿವಾಸ್ ಮೂರ್ತಿ, ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಶಿಕ್ಷಕರಾದ ಗಿರೀಶ್, ಮಹದೇವ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಗಾಯತ್ರಿ, ಶಾಂತ, ವಿಶೇಷಚೇತನರ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು, ವಿಶೇಷ ಚೇತನರು , ಹಿರಿಯ ನಾಗರಿಕರು ಸಾರ್ವಜನಿಕರು, ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...