ಉಡುಪಿ | ಬಿಜೆಪಿ ಮುಖಂಡನ ಮನೆಯಲ್ಲಿ 33.500 ಲೀಟರ್ ಮದ್ಯ ಪತ್ತೆ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರದ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ. ರಮೇಶ್‌ ಪ್ರಭು ಅವರ ಪುತ್ರ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಮುಖಂಡ ಎಂದು ತಿಳಿದು ಬಂದಿದೆ.

ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರ ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದಾಗ, ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ರಮೇಶ್‌ ಪ್ರಭುವನ್ನು ಬಂಧಿಸಲಾಗಿದೆ.

ಈ ಬಗ್ಗೆ ಉಡುಪಿ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕಿ ಮಧುರಾ. ಎನ್‌. ದಾಸ್‌ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...