ಉಡುಪಿ | ಕುಂಭಮೇಳ’ಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

Date:

ಕುಂಭಮೇಳ ದರ್ಶನಕ್ಕೆಂದು ಹೋಗಿದ್ದ ಉಡುಪಿ ಜಿಲ್ಲೆಯ ಬೈಂದೂರು ಮೂಲದ 30 ಜನರಲ್ಲಿ ಓರ್ವ ವ್ಯಕ್ತಿ ಫೆ. 22 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇಲ್ಲಿಯವರೆಗು ಪತ್ತೆಯಾಗಿಲ್ಲ.

ಶ್ರೀಧರ ಮೊಗೇರ (50) ನಾಪತ್ತೆ ಆಗಿರುವ ವ್ಯಕ್ತಿಯಾಗಿದ್ದು, ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮ‌ ಪಂಚಾಯತಿ‌ ವ್ಯಾಪ್ತಿಗೆ ಬರುವ ಅಳವೆಗದ್ದೆ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.

ಈ ಕುರಿತು ನಾಪತ್ತೆಯಾಗಿರುವ ಶ್ರೀಧರ ಮೋಗೆರ ಅವರ ಸ್ನೇಹಿತ ಗಣೇಶ ಮೊಗೇರ ಮಾತನಾಡಿ, 30 ಜನ ಸ್ನೇಹಿತರು ಸೇರಿಕೊಂಡು ಕುಂಭಮೇಳ ಪ್ರವಾಸಕ್ಕೆ ಹೋಗಿದ್ದರು. ಅದರಲ್ಲಿ ಶ್ರೀಧರ ಎಂಬುವವರು ಇಂದು (ಫೆ.22) ಬೆಳಗ್ಗೆ 4 ಗಂಟೆಗೆ ವಾಹನದ ಚಾಲಕನ ಹತ್ತಿರ ಮೂತ್ರ ವಿಸರ್ಜನೆ ಮಾಡಿ ಬರುವುದಾಗಿ ಹೇಳಿ ಹೋದವರು ವಾಪಸ್ಸು ಬಂದಿಲ್ಲ. ಕರೆ ಮಾಡಿದರೆ ಒಮ್ಮೊಮ್ಮೆ ಪೋನ್ ಸ್ವಿಚ್ ಆಪ್ ಬರುತ್ತಿದೆ ಮತ್ತು ರಿಂಗ್ ಆಗುತ್ತಿದ್ದರೂ ಕರೆ ಸ್ವೀಕರಿಸುತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸದ್ಯ ಪ್ರಯಾಗರಾಜದಲ್ಲಿ ಸ್ನೇಹಿತನ ಹುಡುಕಾಟದಲ್ಲಿರುವ ಗೋಕುಲ ಎಂಬುವರು ಮಾತನಾಡಿ, ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ. ನಾವೂ ಸಹಿತ ಹುಡುಕಾಡುತ್ತಿದ್ದೇವೆ. ಕುಂಭಮೇಳದಲ್ಲಿ ಬಹಳ ಗದ್ದಲವಿರುವ ಕಾರಣ ಹುಡುಕಲು ಕಷ್ಟವಾಗುತ್ತಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...