ಉಡುಪಿ | ಅಂಬಾಗಿಲು ಬಳಿ ಲಾರಿ ಪಲ್ಟಿ, ಆರು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

Date:

ಉಡುಪಿ ಅಂಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಜರಿ ಸಾಮಾನುಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದರಲ್ಲಿದ್ದ ಕಾರ್ಮಿಕರು ಸೇರಿ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ದುರ್ಘಟನೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಅಂಬಲಪಾಡಿ ಜಂಕ್ಷನ್ ಬಳಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದಿದ್ದಾರೆ.

1004791318

ಈ ದುರ್ಘಟನೆ ಸಂಭವಿಸುವ ಮುಂಚೆ ಅದೇ ಸ್ಥಳದಲ್ಲಿ ಬೈಕ್ ಸವಾರನೊಬ್ಬ ತನ್ನ ಬೈಕ್ ನಿಲ್ಲಿಸಿ ಪಕ್ಕದಲ್ಲಿ ನಿಂತಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾನೆ. ಆದರೆ ಈತನ ಬೈಕ್ ಮಾತ್ರ ಲಾರಿಯ ಅಡಿಗೆ ಬಿದ್ದು ನಜ್ಜುಗುಜ್ಜಾಗಿದೆ. ಪ್ರಕರಣದ ಬಗ್ಗೆ ಉಡುಪಿ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...