ಉಡುಪಿ | ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

ಉಡುಪಿ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಅನಿರೀಕ್ಷಿತ ದಾಳಿ ನಡೆಸಿ, ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯದೇ ಇರುವ ಅಂಗಡಿ-ಮುಂಗಟ್ಟುಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಸೂಕ್ತ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತೃತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಶೈಕ್ಷಣಿಕ ಸಂಸ್ಥೆಗಳ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದೆ. ಈ ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ, ಮುಂಗಟ್ಟುಗಳ ಪರವಾನಿಗೆ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ವಾಣಿಜ್ಯ ಉದ್ದಿಮೆ ಪರವಾನಿಗೆಯ ಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳು ಜಂಟಿಯಾಗಿ ಪ್ರತೀ ಶಾಲಾ- ಕಾಲೇಜುಗಳನ್ನು ಭೇಟಿ ಮಾಡಿ, “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ”ಯ ಮಾನದಂಡಗಳಿಗೆ ಬದ್ದವಾಗಿರುವುದರ ಕುರಿತು ಪರಿಶೀಲಿಸಿ, ವರದಿ ನೀಡುವಂತೆ ಕಳೆದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು. ಅದರನ್ವಯ ಜಿಲ್ಲೆಯ ಶಿಕ್ಷಣ ಇಲಾಖೆ ವ್ಯಾಪ್ತಿಯ 1069 ಶಾಲೆಗಳಲ್ಲಿ 893 ಶೈಕ್ಷಣಿಕ ಸಂಸ್ಥೆಗಳನ್ನು “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ” ಎಂದು ದೃಢೀಕರಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಇದು ಪೂರ್ಣಪ್ರಮಾಣದಲ್ಲಿ ಆಗಬೇಕೆಂದರು.

ಜಿಲ್ಲೆಯಲ್ಲಿ 2025 ರ ಏಪ್ರಿಲ್ ಮಾಹೆಯಿಂದ ಈವರೆಗೆ 44 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ) ಹಾಗೂ 6(ಬಿ) ಅಡಿಯಲ್ಲಿ ಒಟ್ಟು 578 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 98,550 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 110 ಪ್ರಕರಣಗಳಿಂದ 12,450 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ಜಿಲ್ಲೆಯಾದ್ಯಂತ ಕೋಟ್ಪಾ ಕಾಯಿದೆಯ ಉಲ್ಲಂಘನೆಯಾಗದAತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್‌ಗಳ ಗ್ರಾಮಗಳನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಉಳಿದ ಗ್ರಾಮಗಳನ್ನು ಸಹ ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಹಕರಿಸಬೇಕು ಎಂದರು.

ತಂಬಾಕು ಮುಕ್ತ ಯುವ ಅಭಿಯಾನ 3.0. ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಬೀದಿನಾಟಕ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಂಡು, ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ಮೂಲಕ ಯುವಜನರು ತಂಬಾಕು ಸೇವನೆಯ ವ್ಯಸನಕ್ಕೆ ತುತ್ತಾಗುವುದನ್ನು ತಡೆಯುವುದರೊಂದಿಗೆ ಈಗಾಗಲೇ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸಿರುವವರನ್ನು ವ್ಯಸನದಿಂದ ಹೊರಬರುವಂತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...