ಉಡುಪಿ | ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ

Date:

ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಇಲಾಖೆ ಕುಂದಾಪುರ ಹಾಗೂ ರೈತ ಸಂಪರ್ಕ ಕೇಂದ್ರ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬಿಜೂರು ಹೋಸ್ಕೋಟೆಉ ಉತ್ಕೃಷ್ಟ ಸಭಾಭವನದಲ್ಲಿ ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಉಪ ಯೋಜನಾ ನಿರ್ದೇಶಕ (ಆತ್ಮ) ಡಾ. ರಾಜೇಶ್ ಡಿ.ಪಿ. ಮಾತನಾಡಿ, ಹರಳು ರೂಪದ ಯೂರಿಯಾಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ರೈತರಿಗೆ ಖರ್ಚು ಕಡಿಮೆಯಾಗಲಿದೆ. ರೈತರು ಕಡಿಮೆ ದರದಲ್ಲಿ ದೊರೆಯುವ ಪರಿಸರ ಸ್ನೇಹಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ಮಣ್ಣಿನ ಆರೋಗ್ಯ ಫಲವತ್ತತೆಯನ್ನು ಕಾಪಾಡಬಹುದು ಎಂದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ತಜ್ಞ ಡಾ. ನವೀನ್ ನ್ಯಾನೋ ಯೂರಿಯಾ ಉಪಯೋಗಗಳ ಬಗ್ಗೆ, ಸಸ್ಯಗಳಲ್ಲಿ ಅದು ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಯೂರಿಯಾ ಬಳಸುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆನ್ನಮ್ಮ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಂಜಿತ್ ಪೂಜಾರಿ, ಬೈಂದೂರು ಕೃಷಿಕ ಸಮಾಜ ಅಧ್ಯಕ್ಷ ವೆಂಕಟೇಶ ಹೆಚ್, ಜಯರಾಮ್ ಶೆಟ್ಟಿ, ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ನಾಗರಾಜ್ ನಾಯಕ್, ಶ್ರೀಧರ್ ಬಿಲ್ಲವ, ಗಾಯತ್ರಿ ದೇವಿ, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ದೀಕ್ಷಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...