ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದಿಸುವ ಪೋಸ್ಟ್‌ಅನ್ನು ಹಂಚಿಕೊಂಡ ಆರೋಪದ ಮೇಲೆ ಇಬ್ಬರನ್ನು ಉಡುಪಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬ್ರಹ್ಮಾವರದ ವಾರಂಬಳ್ಳಿ ನಿವಾಸಿ, ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್ ಸಂತೋಷ್ ಕುಮಾರ್ ಶೆಟ್ಟಿ (56) ಮತ್ತು ಕಲ್ಪತರು ಇಂಡಸ್ಟ್ರೀಸ್ ಮಾಲೀಕ, ಕೋಟೇಶ್ವರ ನಿವಾಸಿ ಕೆ ನಾಗರಾಜ್ (62) ಎಂದು ಹೆಸರಿಸಲಾಗಿದೆ.
ಈ ಇಬ್ಬರೂ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಪೋಸ್ಟ್ ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196 (1) ಮತ್ತು 353 (2) ಸೇರಿದಂತೆ ಇತರ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




