ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಸಂಜೆ ಮೊಹಮ್ಮದ್ ಅಜೀಂ ಕಾಪು ಮತ್ತು ಬಜ್ಪೆಯ ಮೊಹಮ್ಮದ್ ರಾಜಿಕ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯು ಆಗಸ್ಟ್ 5ರಂದು ನಡೆದಿತ್ತು ಎಂದು ಹೇಳಲಾಗಿದೆ. ಹೆಜಮಾಡಿ ಟೋಲ್ ಬಳಿ ವಾಹನವೊಂದರಲ್ಲಿ ದನಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ,ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಮತ್ತು ಸಿಬ್ಬಂದಿಗಳು ಪ್ರಶ್ನಿಸಿದಾಗ ಆರೋಪಿಗಳು ಗಲಾಟೆ ಮಾಡಿದ್ದಾರೆ. ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿಯೇ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬವರನ್ನು ವಶಕ್ಕೆ ಪಡೆದಿದ್ದರು. ಇದೀಗ, ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಘಟನೆ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಕಾರಿನಲ್ಲಿದ್ದ ಉಳಿದ ಆರೋಪಿಗಳಾದ ಸಫ್ಘಾನ್ ಕಾಪು, ಅಜೀಂ ಕಾಪು ಮತ್ತು ರಾಜಿಕ್ ಬಜಪೆ ಎಂಬವರ ಬಂಧನಕ್ಕೆ ಶೋಧ ನಡೆಯುತ್ತಿದೆ ಎಂದು ತಳಿದುಬಂದಿದೆ.




